ಚಾಮರಾಜನಗರ : ಇಂದು ಬಿಡುಗಡೆಯಾದ ಹುಲಿ ಗಣತಿಯಲ್ಲಿ ಕರ್ನಾಟಕದಲ್ಲಿ ಅತಿಹೆಚ್ಚು ಹುಲಿಗಳು ಇರುವ ಪ್ರದೇಶವಾಗಿ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮೊದಲವಾಗಿ ಹೊರಹೊಮ್ಮಿದ್ದು, ದೇಶದಲ್ಲಿ ಅತಿಹೆಚ್ಚು ಹುಲಿಗಳು ಹೊಂದಿದ ಎರಡನೇ ಟೈಗರ್ ರಿಸರ್ವ್ ಆಗಿ ಗುರುತಿಸಿಕೊಂಡಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 191 ಹುಲಿಗಳಿವೆ ಎಂದು ಅಂದಾಜು ಮಾಡಲಾಗಿದೆ. ನಾಗರಹೊಳೆ ಸಂರಕ್ಷಿತಾರಣ್ಯದಲ್ಲಿ 185, ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ 60, ಭದ್ರಾದಲ್ಲಿ 44 ಹಾಗೂ ಕಾಳಿಯಲ್ಲಿ 29 ಹುಲಿಗಳಿವೆ ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿದೆ.
ಜಿಂ ಕಾರ್ಬೆಟ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ 319 ವ್ಯಾಘ್ರಗಳಿದ್ದು, ದೇಶದಲ್ಲೇ ಅತಿ ಹೆಚ್ಚು ಹುಲಿಗಳಿರುವ ರಕ್ಷಿತಾರಣ್ಯವಾಗಿದೆ. ಬಂಡೀಪುರ ಎರಡನೇ ಸ್ಥಾನದಲ್ಲಿದೆ. ಇನ್ನು ಕರ್ನಾಟಕದಲ್ಲಿ ಬಂಡೀಪುರ ಮೊದಲ ಸ್ಥಾನದಲ್ಲಿದ್ದು, ನಾಗರಹೊಳೆ ಎರಡನೇ ಸ್ಥಾನದಲ್ಲಿದ್ದು, ಬಿಆರ್‌ಟಿ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲೇ ಅತಿ ಹೆಚ್ಚು ಹುಲಿಗಳಿರುವ ಸಂರಕ್ಷಿತಾರಣ್ಯಗಳಲ್ಲಿ ಮೊದಲ ಹಾಗೂ ಮೂರನೇ ಸ್ಥಾನ ಪಡೆಯುವ ಮೂಲಕ ಚಾಮರಾಜನಗರ ಹುಲಿಗಳ ನಾಡು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…
ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…