Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕಿಡಿಗೇಡಿತನ ಮಾಡುವುದು ಬಿಜೆಪಿಗರಿಗೆ ರಕ್ತದಲ್ಲೇ ಬಂದು ಬಿಟ್ಟಿದೆ : ರಾಮಲಿಂಗಾರೆಡ್ಡಿ

ಬೆಂಗಳೂರು : ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿತನದಲ್ಲಿ ಭಾಗಿಯಾಗುತ್ತಾರೆ. ಈ ರೀತಿ ಗಲಾಟೆ ಹಾಗೂ ಗಲಭೆ ಮಾಡಿಸುವುದು ಅವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರು ಕಿತಾಪತಿ ಮಾಡಿ ಕಿತ್ತಾಟ ತಂದಿಡುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ಕೋಮುಗಲುಭೆ ಮಾಡಿಸುವುದು ಜಗಳ ಮಾಡಿಸುವುದು ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವ ಕೆಲಸವನ್ನ ಮೊದಲಿನಿಂದಲೂ ಬಿಜೆಪಿಗರು ಮಾಡಿಕೊಂಡು ಬಂದಿದ್ದಾರೆ ಎಂದಿದ್ದಾರೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್‍ಗಿರಿ, ಗಲಾಟೆ ಮಾಡುವುದು ಹೊಡೆಯುವುದು ಮಾಡಿಕೊಂಡು ಬಂದಿದ್ದಾರೆ. ಇದಕ್ಕೆಲ್ಲ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಹೆಸರು ಬದಲಿಸಿಕೊಂಡು ಭಾಗಿಯಾಗುತ್ತಾರೆ. ಇದೆಲ್ಲ ಅವರ ಹುಟ್ಟುಗುಣ, ರಕ್ತದಲ್ಲೇ ಅವರಿಗೆ ಇದೆಲ್ಲ ಬಂದು ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ