ಬೆಂಗಳೂರು : ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿತನದಲ್ಲಿ ಭಾಗಿಯಾಗುತ್ತಾರೆ. ಈ ರೀತಿ ಗಲಾಟೆ ಹಾಗೂ ಗಲಭೆ ಮಾಡಿಸುವುದು ಅವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರು ಕಿತಾಪತಿ ಮಾಡಿ ಕಿತ್ತಾಟ ತಂದಿಡುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ಕೋಮುಗಲುಭೆ ಮಾಡಿಸುವುದು ಜಗಳ ಮಾಡಿಸುವುದು ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವ ಕೆಲಸವನ್ನ ಮೊದಲಿನಿಂದಲೂ ಬಿಜೆಪಿಗರು ಮಾಡಿಕೊಂಡು ಬಂದಿದ್ದಾರೆ ಎಂದಿದ್ದಾರೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್‍ಗಿರಿ, ಗಲಾಟೆ ಮಾಡುವುದು ಹೊಡೆಯುವುದು ಮಾಡಿಕೊಂಡು ಬಂದಿದ್ದಾರೆ. ಇದಕ್ಕೆಲ್ಲ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಹೆಸರು ಬದಲಿಸಿಕೊಂಡು ಭಾಗಿಯಾಗುತ್ತಾರೆ. ಇದೆಲ್ಲ ಅವರ ಹುಟ್ಟುಗುಣ, ರಕ್ತದಲ್ಲೇ ಅವರಿಗೆ ಇದೆಲ್ಲ ಬಂದು ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…
ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…
ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ…
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ…
ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…