BREAKING NEWS

ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಿಸಲು ಸುಪ್ರೀಂಕೋರ್ಟ್ ಬಳಸದಿರಿ: ಸರ್ವೋಚ್ಛ ನ್ಯಾಯಾಲಯ ಚಾಟಿ

ನವದೆಹಲಿ: ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಾಗಲು ಸುಪ್ರೀಂ ಕೋರ್ಟ್‌ಅನ್ನು ಬಳಸದಿರಿ ಎಂದು ಅರ್ಜಿದಾರರಿಗೆ ಸರ್ವೋಚ್ಛ ನ್ಯಾಯಾಲಯ ಸೋಮವಾರ ಚಾಟಿ ಬೀಸಿದೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ಕಾಲಿನ್‌ ಗೊನ್ಸಾಲ್ವೆಸ್‌ ಅವರು ವಾದ ಮಂಡಿಸಿದರು.

ಈ ವೇಳೆ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು, “ಮಣಿಪುರ ಹಿಂಸಾಚಾರವನ್ನು ಹೆಚ್ಚಿಸಲು ಸುಪ್ರೀಂಕೋರ್ಟ್‌ಅನ್ನು ಬಳಕೆ ಮಾಡಿಕೊಳ್ಳದಿರಿ” ಎಂದು ಹೇಳಿದರು.

“ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಸುಪ್ರೀಂ ಕೋರ್ಟ್‌ ಗಮನಿಸಬಹುದು. ಹೆಚ್ಚುವರಿಯಾಗಿ ಯಾವುದಾದರೂ ಕ್ರಮ ತೆಗೆದುಕೊಳ್ಳಿ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಬಹುದು. ಆದರೆ, ಯಾವುದೇ ರಾಜ್ಯದ ಆಡಳಿತವನ್ನು ಸುಪ್ರೀಂಕೋರ್ಟ್‌ ನೋಡಿಕೊಳ್ಳುವುದಿಲ್ಲ. ಮಣಿಪುರ ಕಾನೂನು ಮತ್ತು ಸುವ್ಯವಸ್ಥೆಯು ಸುಪ್ರೀಂಕೋರ್ಟ್‌ ಕೈಯಲ್ಲಿಲ್ಲ. ಹಾಗಾಗಿ, ನ್ಯಾಯಾಲಯವನ್ನು ಹಿಂಸಾಚಾರ ಹೆಚ್ಚಾಗಲು ಬಳಸಿಕೊಳ್ಳಬಾರದು” ಎಂದು ತಿಳಿಸಿದರು.

“ನಿಮ್ಮ ಬಳಿ ಸಕಾರಾತ್ಮಕ ವಿಷಯಗಳಿದ್ದರೆ, ಸಮಸ್ಯೆ ಬಗೆಹರಿಸಲು ಸಲಹೆಗಳಿದ್ದರೆ ಮಂಗಳವಾರದೊಳಗಾಗಿ ನಮಗೆ ಹೇಳಿ. ಅದನ್ನು ಪರಿಶೀಲಿಸಿ ಕೇಂದ್ರ ಹಾಗೂ ಮಣಿಪುರ ಸರ್ಕಾರಕ್ಕೆ ಸೂಚನೆಗಳ ನೀಡಲಾಗುವುದು. ಆದರೆ, ಸಮಸ್ಯೆಯನ್ನು ಮತ್ತಷ್ಟು ಬಿಗಡಾಯಿಸುವುದು ಬೇಡ” ಎಂದರು.

ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ಮಣಿಪುರ ಹಿಂಸಾಚಾರವು ಅತ್ಯಂತ ಸೂಕ್ಷ್ಮ ವಿಷಯವಾಗಿದೆ. ಇದರ ಕುರಿತು ಜನರಿಗೆ ತಪ್ಪು ಮಾಹಿತಿ ನೀಡುವುದು ಬೇಡ” ಎಂದರು.

ಈ ವೇಳೆ ನ್ಯಾಯಪೀಠವು, ರಾಜ್ಯ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಅಥವಾ ವೇತನ ಕಡಿತವನ್ನು ಎದುರಿಸುವಂತೆ ಜೂನ್‌ನಲ್ಲಿ ಹೊರಡಿಸಲಾದ ಸುತ್ತೋಲೆಯ ಕುರಿತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತು. ಬಳಿಕ ವಿಚಾರಣೆಯನ್ನು ಮಂಗಳವಾರಕ್ಕೆ (ಜುಲೈ 11) ಮುಂದೂಡಿತು.

andolanait

Recent Posts

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

35 mins ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

1 hour ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…

2 hours ago

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…

2 hours ago

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ…

2 hours ago

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

3 hours ago