BREAKING NEWS

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆ

ಮೈಸೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 11 ಮಂದಿ ಐಪಿಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌. ಈ ಪೈಕಿ ಏಳು ಅಧಿಕಾರಿಗಳು ವರ್ಗಾವಣೆಯಾದರೆ, ನಾಲ್ಕು ಅಧಿಕಾರಿಗಳು ಮುಂಬಡ್ತಿ ಪಡೆದಿದ್ದಾರೆ.

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆಯಾಗಿದ್ದು, ಈ ಜಾಗಕ್ಕೆ ಬಿ.ರಮೇಶ್ ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.
ಇದರ ಜೊತೆಗೆ ಇದೇ ಮೊದಲ ಬಾರಿಗೆ ಬೆಂಗಳೂರು ನಗರಕ್ಕೆ ವಿಶೇಷ ಆಯುಕ್ತ ಹುದ್ದೆ ಸೃಷ್ಟಿಸಿ, ಅಬ್ದುಲ್ ಸಲೀಂ ಅವರನ್ನು ಆ ಹುದ್ದೆಗೆ ನೇಮಿಸಲಾಗಿದೆ.ವರ್ಗಾವಣೆ ಮತ್ತು ಬಡ್ತಿ ಪಡೆದ ಅಧಿಕಾರಿಗಳು:
ಅಬ್ದುಲ್ ಸಲೀಂ – ಎಡಿಜಿಪಿ, ವಿಶೇಷ ಆಯುಕ್ತ, ಬೆಂಗಳೂರು ನಗರ‌ ಟ್ರಾಫಿಕ್ಉಮೇಶ್ ಕುಮಾರ್ – ಆಡಳಿತ ವಿಭಾಗ, ಎಡಿಜಿಪಿ, ಬೆಂಗಳೂರು ಕೇಂದ್ರ ಕಚೇರಿ  ದೇವಜ್ಯೋತಿ ರೈ – ಐಜಿಪಿ, ಮಾನವ ಹಕ್ಕು ಆಯೋಗರಮಣ ಗುಪ್ತಾ – ಐಜಿಪಿ, ಗುಪ್ತಚರ, ಬೆಂಗಳೂರು ನಗರ ಡಾ.ಬಿ.ಆರ್.ರವಿಕಾಂತೇಗೌಡ – ಡಿಐಜಿ, ಸಿಐಡಿಬಿ.ಎಸ್.ಲೋಕೇಶ್ ಕುಮಾರ್ – ಡಿಐಜಿ, ಬಳ್ಳಾರಿ ವಲಯ
ಚಂದ್ರಗುಪ್ತ – ಡಿಐಜಿ, ಮಂಗಳೂರು ಪಶ್ಚಿಮ ವಲಯಬಡ್ತಿ‌‌ ಪಡೆದ ಅಧಿಕಾರಿಗಳು: ಡಾ.ಶರಣಪ್ಪ – ಡಿಐಜಿ, ಸಿಸಿಬಿ ಬೆಂಗಳೂರುಡಾ.ಎಂ.ಎನ್.ಅನುಚೇತ್ – ಡಿಐಜಿ, ಬೆಂಗಳೂರು ಟ್ರಾಫಿಕ್ ಕಮಿಷನರ್ ರವಿ ಡಿ ಚೆನ್ನಣ್ಣನವರ್ – ವ್ಯವಸ್ಥಾಪಕ ನಿರ್ದೇಶಕ, ಕಿಯೋನಿಕ್ಸ್ಬಿ.ರಮೇಶ್ – ಮಂಗಳೂರು ಕಮಿಷನರ್ ಆಗಿ ಮುಂಬಡ್ತಿ ಪಡೆದಿದ್ದಾರೆ.

andolanait

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

24 mins ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

26 mins ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

28 mins ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

29 mins ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

33 mins ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

38 mins ago