BREAKING NEWS

‘ಕೇಶವಕೃಪ’ದವರು ನೋಡಲೆಂದು ಸದನದಲ್ಲಿ ಬಿಜೆಪಿಯವರಿಂದ ನಾಟಕ: ಸಿಎಂ ಕಿಡಿ

ಬೆಂಗಳೂರು : ಕೇಶವಕೃಪದವರು ನೋಡಲಿ ಎಂದು ಬಿಜೆಪಿಯವರು ಇಲ್ಲಿ ಡ್ರಾಮ ಮಾಡಿದ್ದಾರೆ. ನಾವು ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಉಪಸಭಾಧ್ಯಕ್ಷರ ಮುಖಕ್ಕೆ ಕಾಗದಗಳನ್ನು ಹರಿದು ಎಸೆದದ್ದು ಮತ್ತು ಸ್ಪೀಕರ್ ಪೀಠಕ್ಕೆ ಅವಮಾನಿಸಿದ್ದನ್ನು ವಿರೋಧಿಸಿ ಸದನದಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರ್ಥಪೂರ್ಣ ವಿರೋಧ ಪಕ್ಷ ಇರಬೇಕು. ಈ ಕಾರಣಕ್ಕೇ ನಾವು ಬಿಜೆಪಿ ಮುಕ್ತ ಎನ್ನುವ ಮಾತನ್ನು ಯಾವತ್ತೂ ಆಡಿಲ್ಲ. ಅವರು ಯಾವಾಗಲೂ ವಿರೋಧ ಪಕ್ಷದಲ್ಲೆ ಇರಬೇಕು. ಇವರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಗೌರವ ಇಲ್ಲ ಎಂದು ಕಿಡಿಗಾರಿದರು.

ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತು ಸದನದ ನಿಯಮಾವಳಿಗಳ ಆಧಾರದಲ್ಲಿ ಪ್ರತಿಭಟನೆ ನ ಡೆಸಲು ಬಿಜೆಪಿಯವರಿಗೆ ಅವಕಾಶ ಇತ್ತು. ಆದರೆ ಉಪಸಭಾಧ್ಯಕ್ಷರ ಮುಖಕ್ಕೆ ಪತ್ರ ಎಸೆಯುವುದು, ಸ್ಪೀಕರ್ ಪೀಠಕ್ಕೆ ಅಗೌರವ ತೋರುವುದು, ಅವಮಾನ ಮಾಡುವುದು ನಿಯಮ ಬಾಹಿರ. ಇದು ಅನಾಗರಿಕ ನಡವಳಿಕೆ ಎಂದು ಅವರು ಹೇಳಿದರು.

ಎಚ್.ಡಿ.ಕುಮಾರಸ್ವಾಮಿ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲೂ ಐಎಎಸ್ ಅಧಿಕಾರಿಗಳನ್ನೇ ಲೈಸನಿಂಗ್ ಅಧಿಕಾರಿಗಳನ್ನಾಗಿ ಮಾಡಿದ್ದರು. ಆದೆಲ್ಲಾ ಅವರಿಗೆ ಮರೆತುಹೋಯ್ತಾ ? ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ 2015ರಲ್ಲಿ ರಾಜ್ಯದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಗೆ ಬರುವ ಬಿಜೆಪಿ ರಾಷ್ಟ್ರೀಯ ನಾಯಕರನ್ನು ರಾಜ್ಯದ ಅತಿಥಿಗಳನ್ನಾಗಿ ಘೋಷಿಸಿ ಆ ಶಿಷ್ಟಾಚಾರದಂತೆ ಕ್ರಮ ವಹಿಸಲು ನನ್ನ ಬಳಿ ಬಂದು ಮನವಿ ಮಾಡಿದ್ದರು ಎಂದು ಅವರು ಹೇಳಿದರು.

ಆಗ ನಾನು ಮುಖ್ಯಮಂತ್ರಿ ಆಗಿ ಬಿಜೆಪಿ ನಾಯಕರಿಗೆ ಶಿಷ್ಟಾಚಾರದ ಪ್ರಕಾರ ರಾಜ್ಯದ ಅತಿಥಿಗಳು ಎಂದು ಘೋಷಿಸಿ ಗೌರವ ನೀಡಿದ್ದೆವು. ಇದು ಬಿಜೆಪಿಯವರಿಗೆ ಸ್ಪಷ್ಟವಾಗಿ ಗೊತ್ತಿದ್ದೂ ಸುಳ್ಳು ಹೇಳುತ್ತಾ ನಕಲಿ ಪ್ರತಿಭಟನೆಯ ಡ್ರಾಮಾ ಮಾಡಿದ್ದಾರೆ. ಸ್ಪೀಕರ್ ಜತೆ ಮತ್ತು ಅವರ ಪೀಠದ ಎದುರು ಅತ್ಯಂತ ಅಸಹ್ಯವಾಗಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆರಿಸಿಕೊಳ್ಳುವ ಯೋಗ್ಯತೆ ಇಲ್ಲ. ಅತಿಥಿಗಳನ್ನು ಸತ್ಕರಿಸಿದರೆ ನಮ್ಮ ಮತ್ತು ನಮ್ಮ ರಾಜ್ಯದ ಗೌರವ ಹೆಚ್ಚುತ್ತದೆ. ನಾವು ರೈತರ ಪರವಾಗಿ, ಕಾರ್ಮಿಕರ ಪರವಾಗಿ, ಕೂಲಿಗಳ ಪರವಾಗಿ, ಶ್ರಮಿಕರ ಪರವಾಗಿ, ದಲಿತ-ಹಿಂದುಳಿದವರ-ಅಲ್ಪಸಂಖ್ಯಾತರ ಬದುಕನ್ನು ಎತ್ತರಿಸಲು ಹೋರಾಟ ನಡೆಸಿ ಅಧಿಕಾರಕ್ಕೆ ಬಂದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ದೇಶದ ವಿವಿಧ ರಾಜ್ಯಗಳ ನಾಯಕರು ಭಾರತವನ್ನು ಕಟ್ಟಲು, ಉಳಿಸಲು ಹೋರಾಟ ಮಾಡಲು ಅವರದೆ ಆದ ಸಿದ್ಧಾಂತ ಇಟ್ಟುಕೊಂಡು ಬಂದಿದ್ದಾರೆ. ಶಿಷ್ಠಾಚಾರದಂತೆ ಅವರನ್ನು ಸ್ವಾಗತಿಸಿದ್ದೇವೆ. ಅದನ್ನು ಸಹಿಸಿಕೊಳ್ಳಲು ವಿಪಕ್ಷದವರಿಗೆ ಆಗುತ್ತಿಲ್ಲ. ಆಂತರಿಕವಾಗಿ ಅವರಲ್ಲಿ ಗಲಾಟೆಯಿದೆ. ಬಜೆಟ್, ರಾಜ್ಯಪಾಲರ ಭಾಷಣದ ಅಧಿವೇಶನ ನಡೆಯುತ್ತಿದೆ. ವಿಪಕ್ಷ ನಾಯಕ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇವರ ನಾಟಕ, ಡ್ರಾಮ, ಆಟಗಳಿಗೆಲ್ಲ ನಾವು ಸೊಪ್ಪ ಹಾಕುವುದಿಲ್ಲ. ಸ್ಪೀಕರ್ ಸ್ಥಾನಕ್ಕೆ ಕೊಟ್ಟ ಅಗೌರವವನ್ನು ನಾವು ಒಗ್ಗಟ್ಟಿನಿಂದ ಖಂಡಿಸುತ್ತೇವೆ. ನಿಮಗೆ ಧೈರ್ಯ ತುಂಬಲು ಬದ್ಧರಾಗಿದ್ದೇವೆ.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

5 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

7 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago