ವಿಜಯಪುರ : ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ ಪೆಟ್ರೋಲ್ ಬಂಕ್ಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ನಿನ್ನೆ ನಡೆದಿದೆ. ಮುರಿಗೆಪ್ಪ ಅಥಣಿ ಮೃತ ಚಾಲಕ. ಮಂಗಳವಾರ ಸಾಯಂಕಾಲ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಕಲಬುರಗಿ ಜಿಲ್ಲೆಯ ಅಪ್ಜಲಪುರದಿಂದ ವಿಜಯಪುರಕ್ಕೆ ಹೊರಟಿತ್ತು. ದಾರಿ ಮಧ್ಯೆ ಬಸ್ ಹೆಡ್ಲೈಟ್ ಸಮಸ್ಯೆಯಾಗಿ ಬಂದ್ ಆಗಿದೆ. ಈ ಹಿನ್ನೆಲೆ ದಾರಿ ಮಧ್ಯೆ ಪ್ರಯಾಣಿಕರನ್ನು ಕೆಳಗೆ ಇಳಿಸಿ, ಸಿಂದಗಿ ಡಿಪೋಗೆ ಬಸ್ ಹೊರಟಿತ್ತು.
ಹೀಗೆ ಹೊರಡುವಾಗ ಬಸ್ ಸಿಂದಗಿ ನಗರ ಪ್ರವೇಶಿಸುತ್ತಿದ್ದಂತೆ ಚಾಲಕ ಮುರಿಗೆಪ್ಪ ಅಥಣಿ ಅವರಿಗೆ ಹೃದಯಾಘಾತವಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಆಗ ಬಸ್ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್ಗೆ ನುಗ್ಗುತ್ತಿದ್ದಂತೆ ಅಕ್ಕ-ಪಕ್ಕದಲ್ಲಿದ್ದ ಜನ ಗಾಭರಿಯಿಂದ ಚಲ್ಲಾಪಿಲ್ಲಿಯಾಗಿದ್ದಾರೆ.
ಇದನ್ನು ಕಂಡ ನಿರ್ವಾಹಕ ಶರಣು ಟಾಕಳಿಯವರು ಬಸ್ನ ಬ್ರೇಕ್ ಹಿಡಿದು ನಿಲ್ಲಿಸಿದ್ದಾರೆ. ಕಂಡೆಕ್ಟರ್ ಶರಣು ಅವರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಅಲ್ಲದೇ ಬಸ್‌ನಲ್ಲಿ ಪ್ರಯಾಣಿಕರು ಇಲ್ಲದೆ ಇರುವುದರಿಂದ ಸಂಭವನೀಯ ಅಪಾಯ ತಪ್ಪಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಪ್ಜಲಪುರ ಡಿಪೋ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…