ಬೆಂಗಳೂರು : ಬಿಗ್‌ಬಾಸ್ ಸ್ಪರ್ಧಿ ಪ್ರತಾಪ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸದ್ಯ ಅವರನ್ನು ಬೆಂಗಳೂರಿನ ಆರ್‌ಆರ್ ನಗರದಲ್ಲಿರುವ ಎಸ್ ಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎನ್ನಲಾಗಿದೆ.
ಕೆಲವು ಮೂಲಗಳ ಪ್ರಕಾರ ಬಿಗ್ ಬಾಸ್ ಸ್ಪರ್ಧಿ ಪ್ರತಾಪ್ ಅವರು ಖಾಲಿ ಹೊಟ್ಟೆಯಲ್ಲಿ ವಿಟಮಿನ್ ಮಾತ್ರೆಗಳನ್ನು ತೆಗೆದುಕೊಂಡಿದ್ದರು ಈ ಹಿನ್ನಲೆಯಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ.
ಈ ನಡುವೆ ಪ್ರತಾಪ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗುತಿತ್ತು, ಆದರೆ ಅದೆಲ್ಲ ಸುಳ್ಳು ಅಂಥ ಸಂಬಂಧಪಟ್ಟ ವಾಹಿನಿಯ ಪಿಆರ್‌ಓ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪ್ರತಾಪ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಅವರು ಇಂದು ಅಥಾವ ನಾಳೆ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಸುದ್ದಿ ವೈರಲ್ ಆಗುತ್ತಿದ್ದ ಆಗೇ ಪೊಲೀಸರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.