ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 100ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಸನ್ನಿವೇಶ ಪರಿಸ್ಥಿತಿ ಇದ್ದು, ವಾಸ್ತವಿಕ ಅಧ್ಯಯನದ ಬಳಿಕ ಮುಂದಿನ ತಿಂಗಳ ಮೊದಲ ವಾರದಲ್ಲಿ ಬರ ಪ್ರದೇಶಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶೇ. 79 ರಷ್ಟು ಬಿತ್ತನೆಯಾಗಿದೆ. ಆದರೆ ಮಳೆ ಕೊರತೆಯಿಂದಾಗಿ ಅದು ಒಣಗಿ ಹೋಗುತ್ತಿದ್ದು, ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆಗಸ್ಟ್ ತಿಂಗಳಿನಲ್ಲಿ ತಕ್ಷಣವೇ ಮಳೆ ಬಂದರೆ ಶೇ. 50 ರಿಂದ 60 ರಷ್ಟು ಭಾಗ ಉಳಿಸಿಕೊಳ್ಳಬಹುದು. ಹವಾಮಾನ ಮುನ್ಸೂಚನೆ ಪ್ರಕಾರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆಯ ಅನಿಶ್ಚಿತತೆ ಇದೆ. ಹೀಗಾಗಿ ಬಿತ್ತನೆ ಮಾಡಿದ ಬೆಳೆ ಕೈಗೆ ಬರುವ ನಿರೀಕ್ಷೆಗಳಿಲ್ಲ ಎಂದರು.
4 ಲಕ್ಷ ಹೆಕ್ಟೇರಿನಲ್ಲಿ ಭತ್ತ ಬಿತ್ತನೆಯ ಕೊರತೆಯಾಗಿದೆ. ಇದರಲ್ಲಿ 2 ರಿಂದ 3 ಲಕ್ಷ ಹೆಕ್ಟೇರಿನಲ್ಲಿ ಬಿತ್ತನೆಯಾಗುವ ಸಾಧ್ಯತೆಯಿದೆ. ಸದ್ಯಕ್ಕೆ ಈವರೆಗಿನ ಮಾಹಿತಿ ಪ್ರಕಾರ ತೊಗರಿ ಎರಡೂವರೆ ಲಕ್ಷ ಹೆಕ್ಟೇರಿನಲ್ಲಿ, ಹೆಸರುಕಾಳು 2.22 ಲಕ್ಷ ಹೆಕ್ಟೇರಿನಲ್ಲಿ, ಹತ್ತಿ 1.43 ಲಕ್ಷ ಹೆಕ್ಟೇರ್, ಶೇಂಗಾ 93 ಸಾವಿರ ಹೆಕ್ಟೇರ್, ಸೂರ್ಯಕಾಂತಿ 71 ಸಾವಿರ ಹೆಕ್ಟೇರಿನಲ್ಲಿ ಬಿತ್ತನೆಯಾಗದೆ ಕೊರತೆಯುಂಟಾಗಿದೆ.
ರಾಗಿ, ಭತ್ತ, ಸೂರ್ಯಕಾಂತಿ ಬಿತ್ತನೆಗೆ ಇನ್ನೂ ಸಮಯಾವಕಾಶ ಇದೆ. ರಾಗಿ ಸೆಪ್ಟೆಂಬರ್ 15 ರವರೆಗೂ ಬಿತ್ತನೆ ಮಾಡಬಹುದಾಗಿದ್ದು, ಈವರೆಗಿನ 3.5 ಲಕ್ಷ ಹೆಕ್ಟೇರ್ ಕೊರತೆಯಲ್ಲಿ ಬಹಳಷ್ಟು ಪ್ರದೇಶ ಬಿತ್ತನೆಯಾಗುವ ಅಂದಾಜಿದೆ ಎಂದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಶೇ. 60 ರಷ್ಟು ಮಳೆ ಕೊರತೆಯಾಗಿರಬೇಕು. ಸತತ ಮೂರು ವಾರಗಳ ಕಾಲ ಒಣಹವೆ ಮುಂದುವರೆದಿರಬೇಕು. ಶೇ. 75 ಕ್ಕಿಂತ ಕಡಿಮೆ ಪ್ರದೇಶದಲ್ಲಿ ಬಿತ್ತನೆಯಾಗಿರುವುದು, ಮಣ್ಣಿನಲ್ಲಿ ಶೇ.50ಕ್ಕಿಂತ ಕಡಿಮೆ ತೇವಾಂಶ ಇರುವುದು, ಜಲಾಶಯಗಳಲ್ಲಿ ನೀರಿನ ಮಟ್ಟ ಆಧರಿಸಿ ಬರ ಘೋಷಣೆ ಮಾಡಬೇಕಿದೆ. ಇದರ ಅಧ್ಯಯನಕ್ಕಾಗಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿ ಮೊದಲ ಸುತ್ತಿನ ಸಭೆ ನಡೆಸಿದೆ ಎಂದು ಹೇಳಿದರು.
ಶೇ. 60 ರಷ್ಟು ಮಳೆ ಕೊರತೆಯ ಮಾನದಂಡವನ್ನಷ್ಟೇ ಪರಿಗಣಿಸದೆ ಕ್ಷೇತ್ರ ಮಟ್ಟದಲ್ಲಿ ವಾಸ್ತವಿಕ ಅಧ್ಯಯನದ ಮೂಲಕ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಆಧಾರದ ಮೇಲೆ ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳ ಜಂಟಿ ಸಮಿತಿ ಪ್ರತಿ ತಾಲೂಕಿನಲ್ಲಿ ಕನಿಷ್ಟ 10 ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವಿಕ ಅಧ್ಯಯನ ನಡೆಸಿ ವರದು ಸಿದ್ಧಪಡಿಸಲಿದೆ. ಅದನ್ನು ಈ ತಿಂಗಳ 30ರೊಳಗಾಗಿ ಕೇಂದ್ರ ಸರ್ಕಾರಕ್ಕೆ ರವಾನೆ ಮಾಡಲಾಗುತ್ತಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಉಪಸಮಿತಿ ಸಭೆ ನಡೆಸಿ ಚರ್ಚೆ ನಡೆಸುವ ಮೂಲಕ ಬರ ಪರಿಸ್ಥಿತಿಯನ್ನು ಘೋಷಣೆ ಮಾಡುವುದಾಗಿ ಹೇಳಿದರು.
ಪ್ರಸಕ್ತ ಮುಂಗಾರಿನಲ್ಲಿ ಬಿತ್ತನೆ ಮಾಡಿದ ಬೆಳೆಗಳು ಸಂಪೂರ್ಣ ಒಣಗಿ ಹೋಗಿರುವುದರಿಂದಬಾಗಲಕೋಟೆ, ಗದಗ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಯ 194 ಗ್ರಾಮ ಪಂಚಾಯಿತಿಗಳಲ್ಲಿ 35,284 ರೈತರಿಗೆ 35.95 ಕೋಟಿ ರೂ. ಬೆಳೆವಿಮೆಯನ್ನು ಜೂನ್ 22 ರ ವೇಳೆಗೆ ಪಾವತಿ ಮಾಡಲಾಗಿದೆ. ದಾಖಲಾತಿಗಳ ಕೊರತೆ ಇರುವ ರೈತರಿಗೂ ವಿಮೆ ಪಾವತಿ ಮಾಡುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಪ್ರಧಾನಮಂತ್ರಿ ಪಸಲ್ ಭೀಮಾ ವಿಮೆಗಾಗಿ 16 ಲಕ್ಷ ನೋಂದಣಿಯಾಗಿದೆ. ಕಳೆದ ವರ್ಷ ಮಂಡ್ಯ ಜಿಲ್ಲೆ ಅತೀ ಹೆಚ್ಚು ವಿಮಾ ಸೌಲಭ್ಯವನ್ನು ರೈತರಿಗೆ ದೊರಕಿಸುವ ಮೂಲಕ ಕೇಂದ್ರ ಸರ್ಕಾರದಿಂದ ಪ್ರಶಂಸನಾ ಪತ್ರ ಪಡೆದುಕೊಂಡಿದೆ ಎಂದು ಹೇಳಿದರು.
ಸಿರಿಧಾನ್ಯಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆ. 28 ರಂದು ಮಂಡ್ಯದಲ್ಲಿ ಸಿರಿಧಾನ್ಯ ಮೇಳ ವಸ್ತು ಪ್ರದರ್ಶನ ಮತ್ತು ಬೆಲ್ಲದ ಪರಿಶೆ ಹಾಗೂ ಆಹಾರ ಮೇಳವನ್ನು ಆಯೋಜಿಸಲಾಗಿದೆ ಎಂದರು. ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ಜಿಲ್ಲೆಯಲ್ಲೂ ಪ್ರವಾಸ ಮಾಡಿ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ವೇಳೆ ರೈತರು, ರೈತ ಉತ್ಪಾದಕ ಸಂಸ್ಥೆಗಳ ಪದಾಕಾರಿಗಳು, ರೈತ ಪ್ರತಿನಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…