ಡ್ರಗ್ಸ್‌ ಕೇಸ್: ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ

ಬೆಂಗಳೂರು: ಚಿತ್ರರಂಗದ ಜೊತೆ ನಂಟು ಹೊಂದಿರುವ ಡ್ರಗ್ಸ್ ದಂಧೆಯ ಜಾಲ ಕೆದಕಿದಷ್ಟೂ ವಿಸ್ತಾರವಾಗುತ್ತಿದೆ. ಈ ಪ್ರಕರಣದ ಸಂಬಂಧ ತನಿಖೆ ಮುಂದುವರಿದಂತೆ ಹೊಸ ಹೊಸ ಸೆಲೆಬ್ರಿಟಿಗಳ ಹೆಸರುಗಳು ಹೊರಬರುತ್ತಿವೆ. ಸೋಮವಾರ ನಡೆದ ದಾಳಿಯಲ್ಲಿ ರೂಪದರ್ಶಿ ಸೋನಿಯಾ, ಡಿಸ್ಕೋ ಜಾಕಿ ವಚನ್ ಚಿನ್ನಪ್ಪ ಮತ್ತು ಉದ್ಯಮಿ ಭರತ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ತನಿಖೆ ನಡೆಸುತ್ತಿದ್ದಾರೆ.

ರಾಜಾಜಿನಗರ, ಪದ್ಮನಾಭನಗರ, ಬೆನ್ಸೆನ್ ಟೌನ್ ಮುಂತಾದ ಕಡೆ ಇರುವ ಸೆಲೆಬ್ರಿಟಿಗಳ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ಮಾದಕ ವಸ್ತುಗಳು ಪತ್ತೆ ಆಗಿದ್ದು, ಹಲವರಿಗೆ ಬಂಧನ ಭೀತಿ ಎದುರಾಗಿದೆ.

ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋವಿಂದಪುರ ಮಾದಕ ವಸ್ತು ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ಮಾಡಲಾಗಿದೆ. ಸೋನಿಯಾ, ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್ ಮುಂತಾದವರ ಮನೆಯ ಮೇಲೆ ಪೊಲೀಸರು ದಾಳಿ ಮಾಡಿ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ತೀವ್ರಗೊಳಿಸಿದ್ದಾರೆ.

ಮಾದಕವಸ್ತು ಮಾರಾಟಗಾರ ಥಾಮಸ್ ಈ ಹಿಂದೆ ನೀಡಿದ್ದ ಮಾಹಿತಿಯನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

× Chat with us