ಚಂಡೀಗಢ: 2015ರ ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಅವರನ್ನು ಪಂಜಾಬ್ ರಾಜ್ಯ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.
ನಾರ್ಕೊಟಿಕ್ಸ್ ಡ್ರಗ್ಸ್ ಆ್ಯಂಡ್ ಸೈಕೋಟ್ರಾಪಿಕ್ ಸಬ್‌ಸ್ಟನ್ಸಸ್ ಆ್ಯಕ್ಟ್ ಅಡಿಯಲ್ಲಿ ಸುಖಪಾಲ್ ಖೈರಾ ಅವರನ್ನು ಜಲಾಲಬಾದ್ ಪೊಲೀಸರು ಇಂದು ಬೆಳಗ್ಗೆ (ಸೆಪ್ಟೆಂಬರ್ 28) 6.30ರ ಸುಮಾರಿಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಚಂಡೀಗಢದಲ್ಲಿರುವ ನಿವಾಸದಲ್ಲಿ ಸುಖಪಾಲ್ ಖೈರಾ ಅವರನ್ನು ಬಂಧನಕ್ಕೊಳಪಡಿಸಲಾಗಿದ್ದು, ಈ ವೇಳೆ ಭಾರೀ ಹೈಡ್ರಾಮಾ ನಡೆದಿದೆ.
ಬಂಧನಕ್ಕೂ ಮೊದಲು ಸುಖಪಾಲ್ ಖೈರಾ ಅವರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಹಾಗೆಯೇ, ಬಂಧನದ ಘಟನೆಯನ್ನು ಫೇಸ್‌ಬುಕ್ ಲೈವ್ ಮೂಲಕ ಜನರಿಗೆ ತೋರಿಸಿದ್ದಾರೆ.
ಅಕ್ರಮವಾಗಿ ಮಾದಕವಸ್ತು ಸಾಗಣೆ ಪ್ರಕರಣದಲ್ಲಿ ಸುಖಪಾಲ್ ಖೈರಾ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.
https://x.com/ANI/status/1707223944783376775?s=20
ಸುಖಪಾಲ್ ಸಿಂಗ್ ಖೈರಾ ಅವರನ್ನು 2021ರಲ್ಲೂ ಬಂಧನಕ್ಕೊಳಪಡಿಸಲಾಗಿತ್ತು. ಅಕ್ರಮವಾಗಿ ಮಾದಕವಸ್ತು ಸಾಗಣೆ, ಮಾದಕವಸ್ತು ದಂಧೆ, ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಖಪಾಲ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ನಡುವೆ ನಕಲಿ ಪಾಸ್‌ಪೋರ್ಟ್ ಪ್ರಕರಣವೂ ಸುಖಪಾಲ್ ಖೈರಾ ವಿರುದ್ಧ ಕೇಳಿಬಂದಿತ್ತು.
ರಾಜಕೀಯ ಸೇಡಿಗಾಗಿ ಬಂಧನ
ಈ ನಡುವೆ ಸುಖಪಾಲ್ ಖೈರಾ ಅವರ ಬಂಧನವನ್ನು ಪಂಜಾಬ್ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜಕೀಯ ಸೇಡಿಗಾಗಿ ಕಾಂಗ್ರೆಸ್ ಶಾಸಕ ಸುಖಪಾಲ್ ಖೈರಾ ಅವರನ್ನು ಬಂಧಿಸಲಾಗಿದೆ, ಇದು ಪ್ರತಿಪಕ್ಷಗಳನ್ನು ಬೆದರಿಸುವ ಪ್ರಯತ್ನವಾಗಿದೆ ಮತ್ತು ಪ್ರಮುಖ ವಿಷಯಗಳಿಂದ ಗಮನವನ್ನು ಸೆಳೆಯಲು ಎಎಪಿ ಸರ್ಕಾರ ನಡೆಸಿರುವ ತಂತ್ರವಾಗಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…