Mysore
26
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಬೆಳಗ್ಗೆ 11.30ಕ್ಕೆ ದ್ವಾರಕೀಶ್‌ ಅಂತ್ಯಕ್ರಿಯೆ !

ಬೆಂಗಳೂರು : ಹಿರಿಯ ನಟ ನಿರ್ಮಾಪಕ ನಿರ್ದೇಶಕ ದ್ವಾರಕೀಶ್ (81) ಅವರು ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಬೆಳಿಗ್ಗೆ 11:30ಕ್ಕೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

ಈ ಬಗ್ಗೆ ಕುಟುಂಬದ ಮೂಲಗಳಿಂದ ಮಾಹಿತಿ ನೀಡಲಾಗಿದ್ದು, ಇಂದು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವಂತ ನಟ ದ್ವಾರಕೀಶ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇಂದು ಬೆಳಿಗ್ಗೆ 7.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ನಟನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಜನರು ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದಿದ್ದಾರೆ. ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಕೂಡ ಅಂತಿಮ ದರ್ಶನ ಪಡೆದಿದ್ದಾರೆ.

ಇನ್ನೂ ಇಂದು ಬೆಳಿಗ್ಗೆ 7.30ಕ್ಕೆ ರವೀಂದ್ರ ಕಲಾಕ್ಷೇತ್ರಕ್ಕೆ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಅಲ್ಲಿಯೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆ ನಂತ್ರ ಬೆಳಿಗ್ಗೆ 11.30ಕ್ಕೆ ಚಾಮರಾಜಪೇಟೆಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

Tags: