BREAKING NEWS

ಬಿಜೆಪಿಗೆ ಆರಂಭಿಕ ಮುನ್ನಡೆ : ಕಾಂಗ್ರೆಸ್‌ಗೆ ಕೊಂಚ ಹಿನ್ನಡೆ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್‌ ಎರಡಂಕಿ ದಾಟಿದೆ.

ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮುನ್ನಡೆ, ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಂ ಮುನ್ನಡೆ, ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಡಾ ರಂಗನಾಥ್ ಮುನ್ನಡೆ, ತುಮಕೂರು ನಗರದಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ ಮುನ್ನಡೆ ಸಾಧಿಸಿದ್ದಾರೆ.

ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಸುರೇಶ್ ಗೌಡ ಮುನ್ನಡೆ, ಕೊರಟಗೆರೆ ಕಾಂಗ್ರೆಸ್ ನ ಪರಮೇಶ್ವರ್ ಮುನ್ನಡೆ, ಗುಬ್ಬಿ ಬಿಜೆಪಿ ದಿಲೀಪ್ ಕುಮಾರ್ ಮುನ್ನಡೆ, ಶಿರಾದಲ್ಲಿ ಕಾಂಗ್ರೆಸ್‌ನ ಟಿಬಿ ಜಯಚಂದ್ರ ಮುನ್ನಡೆ, ಪಾವಗಡ ಜೆಡಿಎಸ್‌ನ ತಿಮ್ಮರಾಯಪ್ಪ ಮುನ್ನಡೆ ಗಳಿಸಿದ್ದು, ಮಧುಗಿರಿಯಲ್ಲಿ ಕಾಂಗ್ರೆಸ್‌ನ ಕೆ.ಎನ್.ರಾಜಣ್ಣ ಮುನ್ನಡೆ ಗಳಿಸಿದ್ದಾರೆ.

ಇನ್ನೂ, ಬೆಂಗಳೂರಿನ ಯಲಹಂಕದಲ್ಲಿ ಬಿಜೆಪಿಗೆ ಎಸ್‌ಆರ್‌ ವಿಶ್ವನಾಥ್ ಮುನ್ನಡೆ ಗಳಿಸಿದ್ದಾರೆ. ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್‌ನ ಕೃಷ್ಣ ಬೈರೇಗೌಡ ಮುನ್ನಡೆ, ಯಶವಂತಪುರದಲ್ಲಿ ಬಿಜೆಪಿಯ ಶಾಸಕ ಎಸ್‌ಟಿ ಸೋಮಶೇಖರ್ ಮುನ್ನಡೆ ಗಳಿಸಿದ್ದಾರೆ. ದಾಸರಹಳ್ಳಿಯಲ್ಲಿ ಜೆಡಿಎಸ್‌ ಶಾಸಕ ಆರ್ ಮಂಜುನಾಥ್ ಮುನ್ನಡೆ, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ M ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದು, ಆನೇಕಲ್‌ನಲ್ಲಿ ಕಾಂಗ್ರೆಸ್‌ನ ಬಿ ಶಿವಣ್ಣ ಮುನ್ನಡೆ ಗಳಿಸಿದ್ದಾರೆ.

lokesh

Recent Posts

ಅಕಾಲಿಕ ಮಳೆಯಿಂದ ಬೆಳೆನಷ್ಟ: ಪರಿಹಾರ ನೀಡಲು ರೈತ ಸಂಘಟನೆಗಳ ಒತ್ತಾಯ

ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ…

4 seconds ago

ಮಧ್ಯಪ್ರಾಚ್ಯ ಸಂಘರ್ಷ: ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಲು ಪ್ರಧಾನಿ ಮೋದಿ ಸಲಹೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು,…

13 mins ago

ಮಾರ್ಚ್.‌25ರಂದು ಸಾಲಿಗ್ರಾಮದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಸಾಲಿಗ್ರಾಮ: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾರ್ಚ್.25ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ…

26 mins ago

ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ: ಮೂಲಗಳಿಂದ ಮಾಹಿತಿ

ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್‌…

39 mins ago

ಇಂಧನ ಸೌಲಭ್ಯಗಳ ಮೇಲೆ ದಾಳಿ ಮಾಡಿದರೆ, ಹೊರ್ಮುಜ್‌ ಸಂಪೂರ್ಣ ಮುಚ್ಚುತ್ತೇವೆ : ಅಮೆರಿಕಗೆ ಇರಾನ್‌ ಎಚ್ಚರಿಕೆ

ಟೆಹ್ರಾನ್ : ಪಶ್ಚಿಮ ಏಷ್ಯಾದಲ್ಲಿನ ಯುದ್ಧಕ್ಕೆ ಶೀಘ್ರವೇ ಅಂತ್ಯ ಹಾಡುವುದಾಗಿ ಶನಿವಾರವಷ್ಟೆ ಹೇಳಿದ್ದ ಟ್ರಂಪ್‌, ಈಗ ಇರಾನ್‌ ಮೇಲಿನ ದಾಳಿಗಳನ್ನು…

1 hour ago

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…

2 hours ago