ದೆಹಲಿ : ಸಾಕ್ಷ್ಯಗಳನ್ನು ಮುಚ್ಚಿ ಹಾಕುವ ಉದ್ದೇಶದಿಂದ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಡಿಜಿಟಲ್ ಸಾಕ್ಷ್ಯಗಳನ್ನು(ಫೋನ್) ನಾಶ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ(ಇ.ಡಿ) ನ್ಯಾಯಾಲಯಕ್ಕೆ ಸುಳ್ಳು ಹೇಳುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಆರೋಪಿಸಿದ್ದಾರೆ.
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಪಟ್ಟಂತೆ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಮನೀಶ್ ಸಿಸೋಡಿಯ ಬಂಧಿತರಾಗಿದ್ದು, ಜಾರಿ ನಿರ್ದೇಶನಾಲಯ ಹಗರಣದ ತನಿಖೆ ನಡೆಸುತ್ತಿದೆ. ‘ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಸಿಸೋಡಿಯಾ ಡಿಜಿಟಲ್ ಸಾಕ್ಷ್ಯ ನಾಶ ಮಾಡಿದ್ದಾರೆ. ಹಲವು ಪೋನ್‌ಗಳನ್ನು ಬದಲಾಯಿಸಿದ್ದಲ್ಲದೆ ಸುಮಾರು 14 ಪೋನ್‌ಗಳನ್ನು ನಾಶ ಮಾಡಿದ್ದಾರೆ‘ ಎಂದು ಇ.ಡಿ ನ್ಯಾಯಾಲಯಕ್ಕೆ ತಿಳಿಸಿತ್ತು.
‘ಪ್ರತಿ ಬಾರಿಯೂ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಸುಳ್ಳು ಹೇಳುತ್ತಿದೆ. 14 ಫೋನ್‌ಗಳನ್ನು ಸಿಸೋಡಿಯಾ ನಾಶ ಮಾಡಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದೆ. ಸಿಸೋಡಿಯಾ ಯಾವ ಫೋನ್‌ಅನ್ನು ಕೂಡ ನಾಶ ಪಡಿಸಿಲ್ಲ. 14ರಲ್ಲಿ ಐದು ಫೋನ್ ಇಡಿ ಮತ್ತು ಸಿಬಿಐ ವಶಪಡಿಸಿಕೊಂಡಿದೆ‘ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.
ತನಿಖಾ ಸಂಸ್ಥೆಯ ವಿರುದ್ಧ ವಾಗ್ದಾಳಿ ನಡೆಸಿದ ಸಿಂಗ್, ‘ಎಲ್ಲ 14 ಫೋನ್‌ಗಳು ಕೆಲಸ ಮಾಡುತ್ತಿವೆ. 14ರಲ್ಲಿ ಐದು ಫೋನ್‌ಗಳನ್ನು ಇಡಿ ಮತ್ತು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಇಡಿ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜಾರಿ ನಿರ್ದೇಶನಾಲಯ ಪಟ್ಟಿ ಮಾಡಿರುವ ಫೋನ್ ಸಂಖ್ಯೆಗಳಲ್ಲಿ ಸಿಸೋಡಿಯಾ ಅವರ ಮನೆ ಸಹಾಯಕರು, ಚಾಲಕ ಮತ್ತು ಇತರ ಸಿಬ್ಬಂದಿಗೆ ಸೇರಿದ ಫೋನ್ ಸಂಖ್ಯೆಗಳು ಕೂಡ ಸೇರಿವೆ‘ ಎಂದು ಆರೋಪಿಸಿದ್ದಾರೆ.
‘ಈ ರೀತಿ ಸುಳ್ಳು ಆಪಾದನೆ ಮಾಡುವ ಮೂಲಕ ತನಿಖಾ ಸಂಸ್ಥೆಗಳನ್ನೇ ಅಪಹಾಸ್ಯ ಮಾಡಲಾಗುತ್ತಿದೆ. 14 ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿ ನಾಯಕರು ಮತ್ತು ದೆಹಲಿಯ ಅತ್ಯುತ್ತಮ ಶಿಕ್ಷಣ ಸಚಿವರನ್ನು ದೂಷಿಸುತ್ತಿರುವ ಇ.ಡಿ ಅಧಿಕಾರಿಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು‘ ಎಂದು ಒತ್ತಾಯಿಸಿದ್ದಾರೆ.
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…