ಬೆಂಗಳೂರು : ಕೆಜಿಎಫ್ ಬಾಬು ಎಂದೇ ಖ್ಯಾತರಾಗಿರುವ ಯೂಸುಫ್ ಷರೀಫ್ ಇಂದು ಬುಧವಾರ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ (ED) ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ಯೂಸುಫ್ ಷರೀಫ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ನಂತರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕರ್ನಾಟಕ ಅತ್ಯಂತ ಶ್ರೀಮಂತ ಅಭ್ಯರ್ಥಿಗಳಲ್ಲೊಬ್ಬರು ಕೆಜಿಎಫ್ ಬಾಬು.
ಕೆಜಿಎಫ್ ಬಾಬು ನಿನ್ನೆ ರಾತ್ರಿ ದೆಹಲಿ ತಲುಪಿದ್ದು, ವಿಚಾರಣೆಗಾಗಿ ಇಡಿ ಮುಂದೆ ಇಂದು ಹಾಜರಾಗುವ ನಿರೀಕ್ಷೆಯಿದೆ. ಇವರು ಚುನಾವಣೆಗೆ ಮುನ್ನ ಆದಾಯ ತೆರಿಗೆ (I-T) ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದರು. ಮತದಾರರನ್ನು ನಗದು ನೀಡಿ ಖರೀದಿಸಲು ಯತ್ನಿಸಿದ ಆರೋಪದ ನಡುವೆಯೇ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿ ಮತದಾರರ ಗುರುತು ಚೀಟಿಗಳಲ್ಲದೆ ಬೆಲೆಬಾಳುವ ವಸ್ತುಗಳು ಮತ್ತು ಚೆಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಕೆಜಿಎಫ್ ಬಾಬು ಈ ಬಾರಿ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸಿ ಮೂರನೇ ಸ್ಥಾನ ಗಳಿಸಿದ್ದರು. ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ 1,600 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದರು. ಕೋಲಾರ ಮೂಲದ ಬಾಬು ರೈಲ್ವೇ ಸ್ಕ್ರ್ಯಾಪ್ ಮಾರಾಟ ಮಾಡಿ ಆಗರ್ಭ ಶ್ರೀಮಂತರಾದರು ಎಂದು ಹೇಳಲಾಗುತ್ತಿದೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…