Mysore
20
overcast clouds
Light
Dark

ಡಿಜಿಪಿ ಅಂಜನಿ ಕುಮಾರ್ ಅಮಾನತು ಮಾಡಿದ ಚುನಾವಣಾ ಆಯೋಗ

ಹೈದರಾಬಾದ್: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ  ತೆಲಂಗಾಣ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಾಗಲೇ ಅಂಜನಿ ಕುಮಾರ್ ಮತ್ತು ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಮತ್ತು ಮಹೇಶ್ ಭಾಗವತ್ ಅವರು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಗೌರವಿಸಿದ ನಂತರ ಈ ಆದೇಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇಬ್ಬರು ಐಪಿಎಸ್ ಅಧಿಕಾರಿಗಳೊಂದಿಗೆ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥರನ್ನು ಭೇಟಿ ಮಾಡಿದ ಹಿರಿಯ ಪೊಲೀಸ್ ಅಧಿಕಾರಿಯಿಂದ ಚುನಾವಣಾ ಆಯೋಗ ವಿವರಣೆ ಕೇಳಿದೆ.

ತೆಲಂಗಾಣದ ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಮತ್ತು ನೋಡಲ್ (ವೆಚ್ಚ) ಮಹೇಶ್ ಭಾಗವತ್ ಅವರೊಂದಿಗೆ ತೆಲಂಗಾಣ ಪೊಲೀಸ್ ಮಹಾನಿರ್ದೇಶಕರು ತೆಲಂಗಾಣ ವಿಧಾನಸಭೆಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಅನುಮುಲಾ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನಲ್ಲಿ ಭೇಟಿಯಾಗಿದ್ದರು.

//x.com/ANI/status/1731206886526189972?s=20 

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ