ಹೈದರಾಬಾದ್: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ತೆಲಂಗಾಣ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಾಗಲೇ ಅಂಜನಿ ಕುಮಾರ್ ಮತ್ತು ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಮತ್ತು ಮಹೇಶ್ ಭಾಗವತ್ ಅವರು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಗೌರವಿಸಿದ ನಂತರ ಈ ಆದೇಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಬ್ಬರು ಐಪಿಎಸ್ ಅಧಿಕಾರಿಗಳೊಂದಿಗೆ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥರನ್ನು ಭೇಟಿ ಮಾಡಿದ ಹಿರಿಯ ಪೊಲೀಸ್ ಅಧಿಕಾರಿಯಿಂದ ಚುನಾವಣಾ ಆಯೋಗ ವಿವರಣೆ ಕೇಳಿದೆ.
ತೆಲಂಗಾಣದ ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಮತ್ತು ನೋಡಲ್ (ವೆಚ್ಚ) ಮಹೇಶ್ ಭಾಗವತ್ ಅವರೊಂದಿಗೆ ತೆಲಂಗಾಣ ಪೊಲೀಸ್ ಮಹಾನಿರ್ದೇಶಕರು ತೆಲಂಗಾಣ ವಿಧಾನಸಭೆಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಅನುಮುಲಾ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನಲ್ಲಿ ಭೇಟಿಯಾಗಿದ್ದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…