BREAKING NEWS

ಪದವೀಧರ-ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ : ಮತದಾರರ ಪಟ್ಟಿ ಸಿದ್ಧಪಡಿಸಲು ಆಯೋಗ ಸೂಚನೆ

ಬೆಂಗಳೂರು : ವಿಧಾನ ಪರಿಷತ್‍ಗೆ ನಡೆಯುವ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸುವಂತೆ ಕೇಂದ್ರ ಚುನಾವಣಾ ಆಯೋಗ (ಸಿಇಸಿ) ಸೂಚನೆ ನೀಡಿದೆ. ಸೆ.30 ರಿಂದ ಮತದಾರರ ನೋಂದಣಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಿದೆ.

ನವೆಂಬರ್ 6 ರಂದು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದೆ. ಮತದಾರರ ಪಟ್ಟಿ ಕರಡು ಸಿದ್ದಪಡಿಸಲು ನ.20 ಕಡೆಯ ದಿನ. ನ.23 ರಂದು ಕರಡು ಪಟ್ಟಿಯನ್ನು ಪ್ರಕಟಿಸಬೇಕು. ನ.23 ರಿಂದ ಡಿ.9 ರವರೆಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ. ಡಿ.25 ರಂದು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಡಿ.30 ರಂದು ಅಂತಿಮವಾಗಿ ಮತದಾರರ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಆಯೋಗ ತಿಳಿಸಿದೆ.

ಒಟ್ಟು ಏಳು ಸ್ಥಾನಕ್ಕೆ ಚುನಾವಣೆ: 2024ರ ಜೂನ್ ತಿಂಗಳಲ್ಲಿ ಆರು ಮಂದಿಯ ಸದಸ್ಯತ್ವ ಮುಕ್ತಾಯವಾಗಲಿದೆ. ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರಿರುವ ಪುಟ್ಟಣ್ಣ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಹೀಗಾಗಿ ಒಟ್ಟು ಏಳು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ಚಂದ್ರಶೇಖರ್ ಬಿ. ಪಾಟೀಲï, ನೈರುತ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಎ.ದೇವೇಗೌಡ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ವೈ.ಎ ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಎಸ್.ಎಲ್ ಭೋಜೇಗೌಡ, ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಮರಿತಿಬ್ಬೇಗೌಡ ಅವರ ಅವ 2024ರ ಜೂನ್ ತಿಂಗಳಿಗೆ ಮುಕ್ತಾಯವಾಗಲಿದ್ದು, ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಪುಟ್ಟಣ್ಣ ಸ್ಥಾನಕ್ಕೆ ಉಪಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಪುಟ್ಟಣ್ಣ ಅವಯು 2026ರ ನವೆಂಬರ್‍ಗೆ ಮುಕ್ತಾಯವಾಗುತ್ತಿತ್ತು. ಆದರೆ, ಪುಟ್ಟಣ್ಣ ವಿಧಾನಸಭೆ ಚುನಾವಣೆಗೆ ಸ್ರ್ಪಧಿಸಿದ ಹಿನ್ನೆಲೆ ಮೇಲ್ಮನೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಅವರ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

ವಿಧಾನ ಪರಿಷತ್ ಸದಸ್ಯ ಸ್ಥಾನ ನಾಮನಿರ್ದೇಶನಕ್ಕೆ ಆಕ್ಷೇಪ: ಇತ್ತೀಚೆಗೆ(ಆ.5) ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನ ಶಿಫಾರಸು ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ದೂರು ದಾಖಲಾದ ಹಿನ್ನೆಲೆ ಪರಿಶೀಲನೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಸೂಚನೆ ನೀಡಿದ್ದರು.

ರಾಜ್ಯಪಾಲರಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಜನ ಜಾಗೃತಿ ವೇದಿಕೆ ಮತ್ತು ನ್ಯಾಯಮಿತ್ರ ಸಂಘಟನೆಯ ಕಾರ್ಯದರ್ಶಿ ರಾಘವಾಚಾರ್ ಶಾಸ್ತ್ರಿ ಅವರು ದೂರು ನೀಡಿದ್ದರು. ಈ ದೂರು ಹಿನ್ನೆಲೆ ಆರೋಪದ ಬಗ್ಗೆ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಸೂಚನೆ ನೀಡಿದ್ದರು.

ಎಂ.ಆರ್.ಸೀತಾರಾಮï, ಸುಧಾಮ್ ದಾಸ್ ಮತ್ತು ಮನ್ಸೂರ್ ಖಾನ್ ನಾಮನಿರ್ದೇಶನ ಶಿಫಾರಸು ಬಗ್ಗೆ ಆಕ್ಷೇಪಿಸಲಾಗಿತ್ತು. ಈ ಸಂಬಂಧ ರಾಜ್ಯಪಾಲರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪರಿಶೀಲಿಸುವಂತೆ ನಿರ್ದೇಶನ ನೀಡಿದ್ದರು. ಸಾಮಾಜಿಕ ಸೇವೆ ಕ್ಷೇತ್ರದಲ್ಲಿ ಸುಧಾಮ್ ದಾಸ್, ಶಿಕ್ಷಣ ಕ್ಷೇತ್ರದಲ್ಲಿ ಎಂ. ಆರ್. ಸೀತಾರಾಮ್ ಮತ್ತು ಸಹಕಾರ ಕ್ಷೇತ್ರದಿಂದ ಮನ್ಸೂರ್ ಖಾನ್ ಅವರನ್ನು ವಿಧಾನಪರಿಷತ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಿ ಶಿಫಾರಸು ಮಾಡಲಾಗಿತ್ತು. ಜುಲೈ 29ಕ್ಕೆ ಮೂವರ ನಾಮನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು.

andolanait

Recent Posts

ಕೋಲ್ಕತ್ತಾ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್‌ಬಗಾನ್‌ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…

8 hours ago

ಪಾಣಾಜೆಯಲ್ಲಿ ಅತ್ಯಧಿಕ ಮಳೆ: 16.7 ಸೆಂಟಿಮೀಟರ್ ದಾಖಲು!

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…

8 hours ago

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ…

11 hours ago

ಮೈಸೂರಿನ ಜೆಕೆ ಮೈದಾನದಲ್ಲಿ ಶ್ವಾನಗಳ ಕಲರವ: ಗಮನ ಸೆಳೆದ ವೈವಿಧ್ಯಮಯ ತಳಿಗಳು

ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…

11 hours ago

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…

11 hours ago

ಓದುಗರ ಪತ್ರ: ಹೆಚ್‌ಡಿಕೆಯವರೇ, ಟೀಕೆ ಮಾಡುವಾಗ ಎಚ್ಚರಿಕೆ ಇರಬೇಕಲ್ಲವೇ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…

12 hours ago