ಬೆಳಗಾವಿ : ನಿರ್ಮಾಣ ಹಂತದ ಮನೆಯಲ್ಲಿ ವಿದ್ಯುತ್ ತಗುಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಧಾವಿಸಿದ ಅವರು, ಮೃತ ಕುಟುಂಬದವರಿಗೆ ಸಾಂತ್ವನ ಹೇಳಿ, ಧೈರ್ಯವನ್ನು ತುಂಬಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಜ್ಯೋತಿ ನಗರದ ನಿವಾಸಿಗಳಾದ ಈರಪ್ಪ ಗ ಲಮಾನಿ (50), ಶಾಂತವ್ವ ಈ ಲಮಾನಿ (45) ಹಾಗೂ ಅನ್ನಪೂರ್ಣ ಲಮಾನಿ (8) ಎಂಬುವವರು ಬೆಳಗಾವಿಯ ಅಜಮ್ ನಗರದ ಶಿವಾಲಯ ಮಂದಿರದ ಹತ್ತಿರಲ್ಲಿರುವ ಕಟ್ಟಡ ಕಾಮಗಾರಿಗಳ ಕೆಲಸದಲ್ಲಿ ನಿರತರಾಗಿರುವ ಸಮಯದಲ್ಲಿ ವಿದ್ಯುತ್ ಶಾಖ ತಗುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಇವತ್ತು ಘಟನೆ… pic.twitter.com/FRyB7N2XYs
— Laxmi Hebbalkar (@laxmi_hebbalkar) August 12, 2023
ಇದೇ ವೇಳೆ ಮುಖ್ಯಮಂತ್ರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ ಈ ಘಟನೆಯ ಬಗ್ಗೆ ವಿವರಿಸಿ, ಪ್ರತಿ ವ್ಯಕ್ತಿಗೆ ತಲಾ 2 ಲಕ್ಷ ರೂ,ಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವೆ, ʼʼನನ್ನ ಕರೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ತ್ವರಿತಗತಿಯಲ್ಲಿ ಪರಿಹಾರದ ಹಣ ಬಿಡುಗಡೆಗೊಳಿಸಲು ಆದೇಶ ಹೊರಡಿಸಿದ್ದಾರೆ, ಇದರ ಜತೆಗೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ತಕ್ಕ ಮಟ್ಟಿಗೆ ಆರ್ಥಿಕ ಸಹಾಯವನ್ನು ಸಹ ಮಾಡಿದ್ದೇನೆʼʼ ಎಂದು ತಿಳಿಸಿದ್ದಾರೆ.





