ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 46 ಲಕ್ಷ ಕುಟುಂಬಗಳಿಗೆ ನೀಡಲಾಗುತ್ತಿದ್ದ ವಿದ್ಯುತ್ ಸಬ್ಸಿಡಿ ಇಂದಿಗೆ ಕೊನೆಗೊಳ್ಳಲಿದೆ. ನಾಳೆಯಿಂದ ವಿದ್ಯುತ್ ಬಿಲ್‌ಗೆ ಸಬ್ಸಿಡಿ ನೀಡುವುದಿಲ್ಲ ಎಂದು ದೆಹಲಿ ವಿದ್ಯುತ್ ಸಚಿವೆ ಅತಿಶಿ ಮರ್ಲೆನಾ ಶುಕ್ರವಾರ ಘೋಷಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿರುವ ಅವರು, ವಿದ್ಯುತ್ ಸಬ್ಸಿಡಿ ದಿಢೀರ್ ಸ್ಥಗಿತವಾಗುತ್ತಿರುವುದು ಏಕೆ ಎಂಬ ಬಗ್ಗೆ ವಿವರಣೆಯನ್ನೂ ನೀಡಿದ್ದಾರೆ.
‘ವಿದ್ಯುತ್ ಸಬ್ಸಿಡಿಯನ್ನು ನಿಲ್ಲಿಸಲಾಗಿದೆ. ಎಎಪಿ ಸರ್ಕಾರವು ಮುಂಬರುವ ವರ್ಷಕ್ಕೆ ಸಬ್ಸಿಡಿಯನ್ನು ಮುಂದುವರೆಸುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಆದರೆ, ಆ ನಿರ್ಧಾರಕ್ಕೆ ಸಂಬಂಧಿಸಿದ ಕಡತಕ್ಕೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರ ಅನುಮೋದನೆ ಬೇಕಾಗಿದೆ. ಆದರೆ ಅದು ಈ ವರೆಗೆ ಸಿಕ್ಕಿಲ್ಲ. ಹೀಗಾಗಿ ಸಬ್ಸಿಡಿ ಬಿಡುಗಡೆ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ನಡುವಿನ ವಿವಾದ ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ, ಹಲವು ವಿಷಯಗಳಿಗೆ ಸಂಬಂಧಪಟ್ಟಂತೆ ವಾಗ್ವಾದಗಳು ನಡೆದಿವೆ.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…