BREAKING NEWS

ದೆಹಲಿಯ 46 ಲಕ್ಷ ಕುಟುಂಬಗಳಿಗೆ ನೀಡುತ್ತಿದ್ದ ವಿದ್ಯುತ್ ಸಬ್ಸಿಡಿ ದಿಢೀರ್ ಸ್ಥಗಿತ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 46 ಲಕ್ಷ ಕುಟುಂಬಗಳಿಗೆ ನೀಡಲಾಗುತ್ತಿದ್ದ ವಿದ್ಯುತ್ ಸಬ್ಸಿಡಿ ಇಂದಿಗೆ ಕೊನೆಗೊಳ್ಳಲಿದೆ. ನಾಳೆಯಿಂದ ವಿದ್ಯುತ್ ಬಿಲ್‌ಗೆ ಸಬ್ಸಿಡಿ ನೀಡುವುದಿಲ್ಲ ಎಂದು ದೆಹಲಿ ವಿದ್ಯುತ್ ಸಚಿವೆ ಅತಿಶಿ ಮರ್ಲೆನಾ ಶುಕ್ರವಾರ ಘೋಷಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿರುವ ಅವರು, ವಿದ್ಯುತ್‌ ಸಬ್ಸಿಡಿ ದಿಢೀರ್‌ ಸ್ಥಗಿತವಾಗುತ್ತಿರುವುದು ಏಕೆ ಎಂಬ ಬಗ್ಗೆ ವಿವರಣೆಯನ್ನೂ ನೀಡಿದ್ದಾರೆ.

‘ವಿದ್ಯುತ್ ಸಬ್ಸಿಡಿಯನ್ನು ನಿಲ್ಲಿಸಲಾಗಿದೆ. ಎಎಪಿ ಸರ್ಕಾರವು ಮುಂಬರುವ ವರ್ಷಕ್ಕೆ ಸಬ್ಸಿಡಿಯನ್ನು ಮುಂದುವರೆಸುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಆದರೆ, ಆ ನಿರ್ಧಾರಕ್ಕೆ ಸಂಬಂಧಿಸಿದ ಕಡತಕ್ಕೆ ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ಅವರ ಅನುಮೋದನೆ ಬೇಕಾಗಿದೆ. ಆದರೆ ಅದು ಈ ವರೆಗೆ ಸಿಕ್ಕಿಲ್ಲ. ಹೀಗಾಗಿ ಸಬ್ಸಿಡಿ ಬಿಡುಗಡೆ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್‌ ಗವರ್ನರ್‌ಗಳ ನಡುವಿನ ವಿವಾದ ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ, ಹಲವು ವಿಷಯಗಳಿಗೆ ಸಂಬಂಧಪಟ್ಟಂತೆ ವಾಗ್ವಾದಗಳು ನಡೆದಿವೆ.

andolanait

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

1 hour ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

6 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

6 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

6 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

6 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

9 hours ago