ಬೆಂಗಳೂರು : ಅಮೆರಿಕದಲ್ಲಿ ನೆಲೆಸಿದ್ದ ಕರ್ನಾಟಕ ಮೂಲದ ಖ್ಯಾತ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದು, ಅವರಿಗೆ 102 ವರ್ಷ ವಯಸ್ಸಾಗಿತ್ತು.
‘ಪದ್ಮವಿಭೂಷಣ’ ಪ್ರಶಸ್ತಿ ವಿಜೇತ ಸಿ.ಆರ್. ರಾವ್ ಅವರು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಜನಿಸಿದ್ದರು.
ಗಣಿತ ಮತ್ತು ಸಂಖ್ಯಾ ಶಾಸ್ತ್ರ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ನೀಡಿ ಗೌರವಿಸಲಾಗಿದೆ.
ಸಿಆರ್ ರಾವ್ ಅವರು ‘ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ – 2023’, ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು.
ಸಿಆರ್ ರಾವ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಯಿತು.
ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ಮಾತ್ರವಲ್ಲದೆ, ‘ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ – 2023’, ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಇನ್ನು ಮುಂತಾದ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿ ಹೆಚ್ಚಿಸಿದ್ದರು. ಇಂತಹ ಮೇರು ಸಾಧಕರ ನಿಧನ ನಾಡಿಗೆ ತುಂಬಿಬಾರದ ನಷ್ಟ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…
ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್ ಮತ್ತು ಅಜೀವಿಕಾ…
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…
ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…
ಕಾರವಾರ: ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ…
ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…