Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಬಿಜೆಪಿಯಿಂದ ಈಶ್ವರಪ್ಪ ೬ವರ್ಷ ಉಚ್ಚಾಟನೆ !

ಬೆಂಗಳೂರು : ಬಿಜೆಪಿಯ ಸೂಚನೆಯನ್ನು ತಿರಸ್ಕರಿಸಿ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಕಣಕ್ಕಿಳಿದಿರುವುದನ್ನು ಬಹಿರಂಗವಾಗಿಯೇ ಈಶ್ವರಪ್ಪ ವಿರೋಧಿಸಿದ್ದರು. ಈ ಹಿನ್ನಲೆ ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಕಣಕ್ಕಿಳಿದ್ದಾರೆ.

ಈ ಕುರಿತು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್‌ ಈಶ್ವರಪ್ಪ ವಿರುದ್ಧ ಶಿಸ್ತುಕ್ರಮ ಆದೇಶ ಹೊರಡಿಸಿ, ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರವಂತೆ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಶ್ವರಪ್ಪ ಅವರ ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರು ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಇದು ಯಾವುದಕ್ಕೂ ಜಗ್ಗದ ಈಶ್ವರಪ್ಪ ಅಂತಿಮಾವಾಗಿ ಕಣದಲ್ಲಿದ್ದರು. ಇಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆದಿನವಾಗಿತ್ತು, ಆದರೆ ನಾಮಪತ್ರ ಹಿಂಪಡೆಯದಿದ್ದ ಕಾರಣ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.

ಶಿವಮೊಗ್ಗದಲ್ಲಿ ಬಿಜೆಪಿಯಿಂದ ಬಿವೈ ರಾಘವೇಂದ್ರ, ಕಾಂಗ್ರೆಸ್‌ನಿಂದ ಗೀತಾ ಶಿವರಾಜ್‌ಕುಮಾರ್‌ ಕಣದಲ್ಲಿ ಇದ್ದಾರೆ.

Tags: