ಬೆಂಗಳೂರು : ಬಿಜೆಪಿಯ ಸೂಚನೆಯನ್ನು ತಿರಸ್ಕರಿಸಿ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಕಣಕ್ಕಿಳಿದಿರುವುದನ್ನು ಬಹಿರಂಗವಾಗಿಯೇ ಈಶ್ವರಪ್ಪ ವಿರೋಧಿಸಿದ್ದರು. ಈ ಹಿನ್ನಲೆ ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಕಣಕ್ಕಿಳಿದ್ದಾರೆ.
ಈ ಕುರಿತು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್ ಈಶ್ವರಪ್ಪ ವಿರುದ್ಧ ಶಿಸ್ತುಕ್ರಮ ಆದೇಶ ಹೊರಡಿಸಿ, ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರವಂತೆ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಈಶ್ವರಪ್ಪ ಅವರ ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರು ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಇದು ಯಾವುದಕ್ಕೂ ಜಗ್ಗದ ಈಶ್ವರಪ್ಪ ಅಂತಿಮಾವಾಗಿ ಕಣದಲ್ಲಿದ್ದರು. ಇಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆದಿನವಾಗಿತ್ತು, ಆದರೆ ನಾಮಪತ್ರ ಹಿಂಪಡೆಯದಿದ್ದ ಕಾರಣ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.
ಶಿವಮೊಗ್ಗದಲ್ಲಿ ಬಿಜೆಪಿಯಿಂದ ಬಿವೈ ರಾಘವೇಂದ್ರ, ಕಾಂಗ್ರೆಸ್‌ನಿಂದ ಗೀತಾ ಶಿವರಾಜ್‌ಕುಮಾರ್ ಕಣದಲ್ಲಿ ಇದ್ದಾರೆ.
ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…
ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…
ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…
೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…
ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…