BREAKING NEWS

ಕಾಂಗ್ರೆಸ್​ ಪ್ರಣಾಳಿಕೆಗೆ ಬೆಂಕಿ ಹಚ್ಚಿದ ಈಶ್ವರಪ್ಪ

ಕಲಬುರಗಿ : ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಕೆಎಸ್ ಈಶ್ವರಪ್ಪ ಒಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್​ನ ಪ್ರಣಾಳಿಕೆಯ ಪ್ರತಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.ಚುನಾವಣಾ ಪ್ರಚಾರದ ನಿಮಿತ್ತ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಈಶ್ವರಪ್ಪ, ಇಂದು ನಗರದಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಕಾಂಗ್ರೆಸ್​​ ಪ್ರಣಾಳಿಕೆ ಪ್ರತಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದರು.

ಬಳಿಕ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್​​ನದ್ದು ರಾಷ್ಟ್ರ ದ್ರೋಹಿ ಪ್ರಣಾಳಿಕೆ. ಕಾಂಗ್ರೆಸ್​​ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್​ ಸರ್ಕಾರ PFI ಮೇಲಿದ್ದ 173 ಪ್ರಕರಣ​ ಹಿಂಪಡೆದಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಕಾಂಗ್ರೆಸ್​ ಬೆಂಬಲ ನೀಡಿತ್ತು. ದೇಶದಲ್ಲಿ PFI ಬ್ಯಾನ್ ಆಗಿದೆ ಎನ್ನುವುದೇ ಕಾಂಗ್ರೆಸ್​ಗೆ ಗೊತ್ತಿಲ್ಲ. ಬಿಜೆಪಿ ಸರ್ಕಾರ ರಾಷ್ಟ್ರದ್ರೋಹಿ ಸಂಘಟನೆಯನ್ನು ಬ್ಯಾನ್ ಮಾಡಿದೆ. ಭಜರಂಗದಳ ಮುಟ್ಟಿದ್ದರಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ. ವಿಪಕ್ಷ ಸ್ಥಾನ ಪಡೆಯುವಷ್ಟು ಸ್ಥಾನವನ್ನೂ ಕಾಂಗ್ರೆಸ್​ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್​ ಸರ್ಕಾರ PFI ಮೇಲಿದ್ದ 173 ಪ್ರಕರಣ​ ಹಿಂಪಡೆದಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಕಾಂಗ್ರೆಸ್​ ಬೆಂಬಲ ನೀಡಿತ್ತು. ದೇಶದಲ್ಲಿ PFI ಬ್ಯಾನ್ ಆಗಿದೆ ಎನ್ನುವುದೇ ಕಾಂಗ್ರೆಸ್​ಗೆ ಗೊತ್ತಿಲ್ಲ. ಬಿಜೆಪಿ ಸರ್ಕಾರ ರಾಷ್ಟ್ರದ್ರೋಹಿ ಸಂಘಟನೆಯನ್ನು ಬ್ಯಾನ್ ಮಾಡಿದೆ. ಆಂಜನೇಯನ ಬಾಲಕ್ಕೆ ರಾವಣ ಬೆಂಕಿಯಿಟ್ಟ. ಆ ರಾವಣನ ಅಧಿಕಾರವೇ ನಾಶವಾಯ್ತು. ಇದೀಗ ಭಜರಂಗದಳ ಮುಟ್ಟಿದ್ದರಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ. ವಿಪಕ್ಷ ಸ್ಥಾನ ಪಡೆಯುವಷ್ಟು ಸ್ಥಾನವನ್ನೂ ಕಾಂಗ್ರೆಸ್​ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರು.

ಭಜರಂಗದಳ ರಾಷ್ಟ್ರಪ್ರೇಮಿ ಸಂಘಟನೆ. ಕಾಂಗ್ರೆಸ್ ಪ್ರಣಾಳಿಕೆ ಮಹಮ್ಮದ್ ಅಲಿ ಜಿನ್ನಾ ಪ್ರಣಾಳಿಕೆಯಾಗಿದೆ. ಈ ಪ್ರಣಾಳಿಕೆಯನ್ನು ಕೂಡಲೇ ಹಿಂಪಡೆಯಬೇಕು. ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಟ್ಟು ಹಾಕುತ್ತೇನೆ ಎಂದು ಪ್ರಣಾಳಿಕೆ ಪ್ರತಿಯನ್ನು ಸುಟ್ಟುಹಾಕಿದರು.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago