ಮೈಸೂರು: ನಿನ್ನೆ ರಾತ್ರೋ ರಾತ್ರಿ ನಗರದ ಗನ್‌ಹೌಸ್ ವೃತ್ತದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಪ್ರತಿಮೆಯನ್ನು ಅನಾವಣ ಮಾಡಿರುವುದನ್ನು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಒಂದು ಪ್ರಬುದ್ಧ ಸಂಸ್ಥೆಯಿಂದ ಇಂತಹ ಕೆಲಸ ಸಮಂಜಸವಲ್ಲ. ಉದ್ದೇಶಿತ ಪ್ರತಿಮೆಗೆ ಸತತವಾಗಿ ವಿರೋಧ ತೋರಿದ ಸಾರ್ವಜನಿಕರಿಗೆ ಸ್ಪಂದಿಸಿಈ ಬಗ್ಗೆ ಪುನರ್ ವಿಮರ್ಶೆ ಮಾಡಲು ಮನವಿ ಕೂಡ ತಲುಪಿಸಿ ನನ್ನ ಬೆಂಬಲ ಸೂಚಿಸಿದ್ದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಈ ಬೆಳವಣಿಗೆಯನ್ನು ವಿರೋಧಿಸಿ ಅರಸು ಸಮಾಜದ ಮುಖಂಡ ಅಮರನಾಥ ರಾಜೇ ಅರಸ್ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವು, ರಾತ್ರಿ ಪುತ್ತಳಿ ಇಡುವ ಮೂಲಕ ಶಿವರಾತ್ರಿ ರಾಜೇಂದ್ರ ಸ್ವಾಮಿಗಳಿಗೆ ಹಾಗೂ ಜೆಎಸ್‌ಎಸ್ ಸಂಸ್ಥೆಗೆ ಅವಮಾನ ಮಾಡಿದ್ದಾರೆ. ಸುಪ್ರೀಮ್ ಕೋರ್ಟ್ ಆದೇಶ ಪಾಲನೆ ಮಾಡದೆ, ಯಾವುದೇ ದಾಖಲಾತಿ ಇಲ್ಲದೆ ಈ ಕೆಲಸ ಮಾಡಿರುವುದು ಇಡೀ ಮೈಸೂರು ಹಾಗೂ ಮೈಸೂರಿಗರಿಗೆ ಮಾಡಿರುವ ಅವಮಾನ ಎಂದು ಆರೋಪಿಸಿದ್ದಾರೆ.
ಗನ್‌ಹೌಸ್ ವೃತತ್ತದಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪುತ್ಥಳಿ ಸ್ಥಾಪಿಸಬೇಕು. ಇಲ್ಲವಾದಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಸ್ಥಾಪನೆ ಮಾಡಲಿ. ಇಲ್ಲವಾದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.





