BREAKING NEWS

ಗನ್‌ಹೌಸ್‌ ವೃತ್ತದಲ್ಲಿ ರಾಜೇಂದ್ರ ಸ್ವಾಮಿಗಳ ಪುತ್ಥಳಿ ಸ್ಥಾಪನೆ: ರಾಜವಂಶಸ್ಥೆ ವಿರೋಧ

ಮೈಸೂರು: ನಿನ್ನೆ ರಾತ್ರೋ ರಾತ್ರಿ ನಗರದ ಗನ್‌ಹೌಸ್‌ ವೃತ್ತದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಪ್ರತಿಮೆಯನ್ನು ಅನಾವಣ ಮಾಡಿರುವುದನ್ನು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಒಂದು ಪ್ರಬುದ್ಧ ಸಂಸ್ಥೆಯಿಂದ ಇಂತಹ ಕೆಲಸ ಸಮಂಜಸವಲ್ಲ. ಉದ್ದೇಶಿತ ಪ್ರತಿಮೆಗೆ ಸತತವಾಗಿ ವಿರೋಧ ತೋರಿದ ಸಾರ್ವಜನಿಕರಿಗೆ ಸ್ಪಂದಿಸಿಈ ಬಗ್ಗೆ ಪುನರ್‌ ವಿಮರ್ಶೆ ಮಾಡಲು ಮನವಿ ಕೂಡ ತಲುಪಿಸಿ ನನ್ನ ಬೆಂಬಲ ಸೂಚಿಸಿದ್ದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಈ ಬೆಳವಣಿಗೆಯನ್ನು ವಿರೋಧಿಸಿ ಅರಸು ಸಮಾಜದ ಮುಖಂಡ ಅಮರನಾಥ ರಾಜೇ ಅರಸ್‌ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವು, ರಾತ್ರಿ ಪುತ್ತಳಿ ಇಡುವ ಮೂಲಕ ಶಿವರಾತ್ರಿ ರಾಜೇಂದ್ರ ಸ್ವಾಮಿಗಳಿಗೆ ಹಾಗೂ ಜೆಎಸ್‌ಎಸ್‌ ಸಂಸ್ಥೆಗೆ ಅವಮಾನ ಮಾಡಿದ್ದಾರೆ. ಸುಪ್ರೀಮ್‌ ಕೋರ್ಟ್‌ ಆದೇಶ ಪಾಲನೆ ಮಾಡದೆ, ಯಾವುದೇ ದಾಖಲಾತಿ ಇಲ್ಲದೆ ಈ ಕೆಲಸ ಮಾಡಿರುವುದು ಇಡೀ ಮೈಸೂರು ಹಾಗೂ ಮೈಸೂರಿಗರಿಗೆ ಮಾಡಿರುವ ಅವಮಾನ ಎಂದು ಆರೋಪಿಸಿದ್ದಾರೆ.

 

ಗನ್‌ಹೌಸ್‌ ವೃತತ್ತದಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಅವರ ಪುತ್ಥಳಿ ಸ್ಥಾಪಿಸಬೇಕು. ಇಲ್ಲವಾದಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಸ್ಥಾಪನೆ ಮಾಡಲಿ. ಇಲ್ಲವಾದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

andolanait

Recent Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

2 mins ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

23 mins ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

39 mins ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

1 hour ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

2 hours ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

2 hours ago