Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಸಾರಿಗೆ ಬಸ್‌ನಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿ ಸಾವು

ಹಾವೇರಿ : ಇಲ್ಲಿ ದಾರುಣ ಘಟನೆಯೊಂದು ನಡೆದಿದೆ. 14 ವರ್ಷದ ವಿದ್ಯಾರ್ಥಿನಿಯೋರ್ವಳು ಸಾರಿಗೆ ಬಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾಳೆ. ವಾಸನ ಹಳ್ಳಿಯ ನಿವಾಸಿ ಮಧು ಕುಂಬಾರ ಮೃತ ದುರ್ದೈವಿ. ಶಾಲೆಗೆ ಹೋಗುವ ವೇಳೆ ಈ ದುರ್ಘಟನೆ ನಡೆದಿದೆ.

ನಡೆದಿದ್ದೇನು? : ಮಧು ಕುಂಬಾರ ಎಂಬ 14 ವರ್ಷದ ಶಾಲಾ ಬಾಲಕಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಶಾಲೆಗೆ ಹೋಗಲು ವಾಸನ ಗ್ರಾಮದಿಂದ ಕುಸನೂರ ಗ್ರಾಮಕ್ಕೆ ತೆರಳುತ್ತಿದ್ದಳು. ಮದುವೆ ಸೀಸನ್ ಹಿನ್ನೆಲೆಯಲ್ಲಿ ಬಸ್ ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ರಶ್ ಇದ್ದಿದ್ದರಿಂದ ವಿದ್ಯಾರ್ಥಿನಿ ಫುಟ್‌ಬೋರ್ಡ್‌ನಲ್ಲಿ ಕ್ರಾಸ್‌ನಲ್ಲಿ ಬಸ್ ತಿರುವು ಪಡೆಯುವ ಸಂದರ್ಭದಲ್ಲಿ ಆಯತಪ್ಪಿ ಕೆಳ ಬಿದ್ದಿದ್ದಾಳೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾರಿಗೆ ಬಸ್ ಚಾಲಕನ ವಿರುದ್ಧ ದೂರು ದಾಖಲಾಗಿದೆ. ಕರ್ನಾಟಕ ಸರ್ಕಾರ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದ ದಿನವೇ ಈ ಘಟನೆ ನಡೆದಿರುವುದು ದುರ್ದೈವದ ಸಂಗತಿ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!