ಹಾವೇರಿ : ಇಲ್ಲಿ ದಾರುಣ ಘಟನೆಯೊಂದು ನಡೆದಿದೆ. 14 ವರ್ಷದ ವಿದ್ಯಾರ್ಥಿನಿಯೋರ್ವಳು ಸಾರಿಗೆ ಬಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾಳೆ. ವಾಸನ ಹಳ್ಳಿಯ ನಿವಾಸಿ ಮಧು ಕುಂಬಾರ ಮೃತ ದುರ್ದೈವಿ. ಶಾಲೆಗೆ ಹೋಗುವ ವೇಳೆ ಈ ದುರ್ಘಟನೆ ನಡೆದಿದೆ.
ನಡೆದಿದ್ದೇನು? : ಮಧು ಕುಂಬಾರ ಎಂಬ 14 ವರ್ಷದ ಶಾಲಾ ಬಾಲಕಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಶಾಲೆಗೆ ಹೋಗಲು ವಾಸನ ಗ್ರಾಮದಿಂದ ಕುಸನೂರ ಗ್ರಾಮಕ್ಕೆ ತೆರಳುತ್ತಿದ್ದಳು. ಮದುವೆ ಸೀಸನ್ ಹಿನ್ನೆಲೆಯಲ್ಲಿ ಬಸ್ ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ರಶ್ ಇದ್ದಿದ್ದರಿಂದ ವಿದ್ಯಾರ್ಥಿನಿ ಫುಟ್‌ಬೋರ್ಡ್‌ನಲ್ಲಿ ಕ್ರಾಸ್‌ನಲ್ಲಿ ಬಸ್ ತಿರುವು ಪಡೆಯುವ ಸಂದರ್ಭದಲ್ಲಿ ಆಯತಪ್ಪಿ ಕೆಳ ಬಿದ್ದಿದ್ದಾಳೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾರಿಗೆ ಬಸ್ ಚಾಲಕನ ವಿರುದ್ಧ ದೂರು ದಾಖಲಾಗಿದೆ. ಕರ್ನಾಟಕ ಸರ್ಕಾರ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದ ದಿನವೇ ಈ ಘಟನೆ ನಡೆದಿರುವುದು ದುರ್ದೈವದ ಸಂಗತಿ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…