ಐಝಾವ್ಲ್ : ಇಂದು ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ವೇಳೆ ಇವಿಎಂ ದೋಷದಿಂದಾಗಿ ಮಿಜೋರಾಂ ಮುಖ್ಯಮಂತ್ರಿ ಝೊರಂತುಂಗಾ ಅವರಿಗೆ ಮತ ಚಲಾಯಿಸಲು ಸಾಧ್ಯವಾಗಲಿಲ್ಲ.
ಮಿಜೋ ನ್ಯಾಷನಲ್ ಫ್ರಂಟ್ ಅಧ್ಯಕ್ಷರೂ ಆಗಿರುವ ಸಿಎಂ ಇಂದು ಬೆಳಿಗ್ಗೆ 19-ಐಝಾವ್ಲ್ ವೆಂಗ್ಲೈ- I ವೈಎಂಎ ಹಾಲ್ ಮತಗಟ್ಟೆಗೆ ಆಗಮಿಸಿದ್ದರು. ಈ ಮತಗಟ್ಟೆಯು ಐಝಾವ್ಲ್ ಉತ್ತರ- I I ವಿಧಾನಸಭಾ ಕ್ಷೇತ್ರದಡಿಯಲ್ಲಿ ಬರುತ್ತದೆ.
“ಇವಿಎಂ ಕೆಲಸ ಮಾಡದೇ ಇದ್ದುದರಿಂದ ನಾನು ಸ್ವಲ್ಪ ಹೊತ್ತು ಕಾದೆ. ಆದರೆ ಯಂತ್ರ ಸರಿಯಾಗದೇ ಇದ್ದುದರಿಂದ ನಾನು ನನ್ನ ಕ್ಷೇತ್ರಕ್ಕೆ ಭೇಟಿ ನೀಡಿ ಸಭೆಯೊಂದರ ನಂತರ ಮತದಾನ ಮಾಡುತ್ತೇನೆ,” ಎಂದು ಮುಖ್ಯಮಂತ್ರಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.
ತಮ್ಮ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು. “ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ತಮ್ಮ ಪಕ್ಷ ಭಾಗವಾಗಿದ್ದರೂ ರಾಜ್ಯದಲ್ಲಿ ಬಿಜೆಪಿ ಜೊತೆಗೆ ಮೈತ್ರಿಯಿಲ್ಲ,” ಎಂದು ಅವರು ಹೇಳಿದರು.
ಝೊರಂತುಂಗ ಅವರು ಐಝ್ವಾಲ್ ಪೂರ್ವ- I ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…