ನವದೆಹಲಿ : ರಾಷ್ಟ್ರರಾಜಧಾನಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಪ್ರಮಾಣದ ಮಾಲಿನ್ಯವನ್ನು ದಾಖಲಿಸಿದ ಬೆನ್ನಲ್ಲೇ ಗುರುವಾರ ವಾಯು ತುರ್ತು ಸ್ಥಿತಿಯನ್ನು ಘೋಷಿಸಲಾಗಿದೆ.
ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ ಈ ಘೋಷಣೆ ಹೊರಬಿದ್ದಿದೆ. ಮಾಲಿನ್ಯ ಮಿತಿಮೀರಿರುವ ಹಿನ್ನೆಲೆಯಲ್ಲಿ ಶುಕ್ರವಾರ ಹಾಗೂ ಶನಿವಾರ ಎಲ್ಲ ಸರ್ಕಾರಿ ಮತ್ತು ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಕಟಿಸಿದ್ದಾರೆ.
ಎಲ್ಲ ಅನಗತ್ಯ ನಿರ್ಮಾಣ ಚಟುವಟಿಕೆಗಳನ್ನು ತಕ್ಷಣದಿಂದ ರದ್ದುಪಡಿಸಲಾಗಿದ್ದು, ಬಿಎಸ್-3 ಪೆಟ್ರೋಲ್ ಮತ್ತು ಬಿಎಸ್-4 ಡೀಸೆಲ್ ಕಾರುಗಳನ್ನು ದೆಹಲಿಯ ಗುರುಗ್ರಾಮ, ಫರೀದಾಬಾಧ್, ಗಾಜಿಯಾಬಾಧ್ ಮತ್ತು ಗೌತಮಬುದ್ಧ ನಗರಗಳಲ್ಲಿ ನಿಷೇಧಿಸಲಾಗಿದೆ.
ವಾಯುಗುಣಮಟ್ಟ ಸೂಚ್ಯಂಕ ಸೊನ್ನೆಯಿಂದ 50 ಇದ್ದರೆ ಉತ್ತಮ ಎಂದು ಪರಿಗಣಿಸಲಾಗುತ್ತದೆ. 51-100 ಇದ್ದಲ್ಲಿ ಸಮಾಧಾನಕರ, 101-200ನ್ನು ಮಂದ ಮಾಲಿನ್ಯ, 201-300ನ್ನು ಕಳಪೆ, 301-400ನ್ನು ತೀರಾ ಕಳಪೆ, 401-500ನ್ನು ತೀವ್ರ ಸ್ವರೂಪದ ಮಾಲಿನ್ಯ ಹಾಗೂ 500ಕ್ಕಿಂತ ಅಧಿಕ ಇರುವುದನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ದೆಹಲಿಯಲ್ಲಿ ಗುರುವಾರ ರಾತ್ರಿ ಎಕ್ಯೂಐ 422 ಆಗಿದೆ. ಇದು ಈ ಋತುವಿನಲ್ಲಿ ದಾಖಲಾದ ಅತ್ಯಧಿಕ ಮಾಲಿನ್ಯ ಪ್ರಮಾಣವಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…