ನವದೆಹಲಿ : ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ಸಾರ್ವಜನಿಕ ಯೋಜನೆಗಳಿಗೆ ಸಂಬಂಧಿಸಿದ ನಿರ್ಮಾಣ ಕಾರ್ಯಗಳನ್ನು ಮತ್ತು ಟ್ರಕ್‌ಗಳು ಹಾಗೂ ವಾಣಿಜ್ಯ ಬಳಕೆ ನಾಲ್ಕು ಚಕ್ರಗಳ ವಾಹನಗಳು ರಾಷ್ಟ್ರ ರಾಜಧಾನಿ ಪ್ರವೇಶ ನಿಷೇಧಿಸಿ ಕೇಂದ್ರ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ.
ಕೇಂದ್ರದ ವಾಯುಮಾಲಿನ್ಯ ನಿಯಂತ್ರಣ ಯೋಜನೆ ಅಡಿ ಈಗಾಗಲೇ ಮೂರು ಹಂತದಲ್ಲಿ ನಿಬಂಧನೆಗಳನ್ನು ವಿಧಿಸಲಾಗಿದ್ದು, ಈಗ ನಾಲ್ಕನೇ ಹಂತದ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ.
ದೆಹಲಿಯಲ್ಲಿ ಮಾಲಿನ್ಯಕಾರಕ ಟ್ರಕ್‌ಗಳು ಮತ್ತು ವಾಣಿಜ್ಯ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಇತರ ರಾಜ್ಯಗಳ ಸಿಎನ್‌ಜಿ, ಎಲೆಕ್ಟ್ರಿಕ್, ಬಿಎಸ್ 4 ವಾಹನಗಳಿಗೆ ಮಾತ್ರ ದೆಹಲಿಯನ್ನು ಪ್ರವೇಶಿಸಲು ಅನುಮತಿ ನೀಡಲಾಗಿದೆ.
ಇನ್ನು ಸರ್ಕಾರಿ ಮತ್ತು ಖಾಸಗಿ ಕಚೇರಿಗಳಿಗೆ ಶೇ. 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಕೇಂದ್ರ ನಿರ್ದೇಶಿಸಿದೆ. ಉಳಿದ ಶೇ. 50 ರಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲಿದ್ದಾರೆ.
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…