BREAKING NEWS

ಎಕ್ಸಿಟ್ ಪೋಲ್ ನಂಬುವುದಿಲ್ಲ ಕಾಂಗ್ರೆಸ್ 146ಕ್ಕೂ ಹೆಚ್ಚು ಸ್ಥಾನ ಪಡೆಯಲಿದೆ : ಡಿಕೆ ಶಿವಕುಮಾರ್

ಬೆಂಗಳೂರು : ಈ ಬಾರಿಯೂ ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದ ಎಕ್ಸಿಟ್ ಪೋಲ್ ಫಲಿತಾಂಶಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ 146 ಸ್ಥಾನಗಳ ಗಡಿಯನ್ನು ದಾಟಲಿದೆ ಎಂದು ಹೇಳಿದ್ದಾರೆ.

ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಅವರು, ಚುನಾವಣಾ ಫಲಿತಾಂಶವು ನಿರ್ಣಾಯಕವಾಗಿ ತಮ್ಮ ಪಕ್ಷದ ಪರವಾಗಿರಲಿದೆ ಮತ್ತು ಯಾವುದೇ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಮತ್ತು ಚುನಾವಣೋತ್ತರ ಮೈತ್ರಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ಎಕ್ಸಿಟ್ ಪೋಲ್ ನ ಅಂಕಿ ಅಂಶಗಳನ್ನು ನಾನು ನಂಬುವುದಿಲ್ಲ. ನನ್ನ ಮೌಲ್ಯಮಾಪನದ ಪ್ರಕಾರ, ನಾವು 146 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಜನರು ತಿಳುವಳಿಕೆಯುಳ್ಳವರು ಮತ್ತು ವಿದ್ಯಾವಂತರು ಮತ್ತು ರಾಜ್ಯದ ಹಿತಾಸಕ್ತಿಗಳನ್ನು ಪರಿಗಣಿಸಿ ಮತ ಚಲಾಯಿಸಿದ್ದಾರೆ. ಕರ್ನಾಟಕದಲ್ಲಿ ಡಬಲ್ ಎಂಜಿನ್ ವಿಫಲವಾಗಿದೆ. ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ಮತದಾನ ನಡೆದಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಬಹುತೇಕ ಮಂದಿ ಕಾಯುತ್ತಿದ್ದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಅತಂತ್ರ ವಿಧಾನಸಭೆಯ ಸುಳಿವು ನೀಡಿವೆ.

lokesh

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

11 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

12 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

14 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

17 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

18 hours ago