BREAKING NEWS

ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ : ಸಾಂಸ್ಕೃತಿಕ ನಗರಿ ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಣೆ ಮಾಡಿದ್ದಾರೆ. ನಮ್ಮ ಮೆಟ್ರೊದ ನೇರಳೆ ಮಾರ್ಗಗಳಾದ ಬೈಯಪ್ಪನಹಳ್ಳಿ – ಕೃಷ್ಣರಾಜಪುರ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವಿನ ಮೆಟ್ರೊ ಮಾರ್ಗಗಳನ್ನು ವಿಡಿಯೋ ಕಾನರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ದೇಶದಲ್ಲಿ ಮೆಟ್ರೊ ಮತ್ತು ನಮೋ ರೈಲುಗಳು ಕ್ರಾಂತಿಯನ್ನುಂಟು ಮಾಡಲಿವೆ. ನೋಯ್ಡಾ, ಗಾಜಿಯಾಬಾದ್, ಮೀರತ್, ಲಖ್ನೋ, ಆಗ್ರಾ, ಕಾನ್ಪುರದಂತಹ ನಗರಗಳಲ್ಲಿ ಮೆಟ್ರೊ ಸಂಚರಿಸಲಿವೆ. ಇದೇ ರೀತಿ ಬೆಂಗಳೂರು ಮತ್ತು ಮೈಸೂರನ್ನು ಮೆಟ್ರೊ ನಗರಗಳನ್ನಾಗಿ ಪರಿವರ್ತಿಸುವುದಾಗಿ ಪ್ರಕಟಿಸಿದರು. ದೇಶದ ಅನೇಕ ಕಡೆ ಸುಗಮ ಸಂಚಾರಕ್ಕಾಗಿ ಮೆಟ್ರೊ ರೈಲು ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ. ಈಗ 2ನೇ ಹಂತದ ನಗರಗಳಲ್ಲೂ ಇದರ ಅವಶ್ಯಕತೆ ಕಂಡುಬರುತ್ತಿದೆ ಎಂದು ಹೇಳಿದರು.

ಭಾರತ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿಯಲ್ಲಿ ಹೊಸ ದಿಕ್ಕಿನತ್ತ ಮುಖ ಮಾಡಿದೆ. ಚಂದ್ರಯಾನದ ಮೂಲಕ ಚಂದ್ರನನ್ನು ತಲುಪಿದೆ. ವಿಶ್ವದಲ್ಲಿ ನಮ್ಮ ದೇಶ ಪ್ರಕಾಶಿಸುತ್ತಿದೆ. ಜಿ-20 ಶೃಂಗಸಭೆಯನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿ ಜಗತ್ತಿನ ಗಮನ ಸೆಳೆದಿದ್ದೇವೆ. ಏಷ್ಯನ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು 107 ಪದಕಗಳನ್ನು ಗೆದ್ದಿದ್ದಾರೆಂದು ದೇಶದ ಸಾಧನೆಯನ್ನು ಕೊಂಡಾಡಿದರು.

ಪ್ಲಾಟ್‍ಫಾರಂನಲ್ಲಿ ಸ್ಕ್ರೀನ್‍ವಿಂಡೋವನ್ನು ಮೆಡ್ ಇಂಡಿಯಾ ಯೋಜನೆಯಲ್ಲೇ ರೂಪಿಸಲಾಗಿದೆ. ನಮೋ ಭಾರತ್ ರೈಲಿನಲ್ಲಿ ಗಾಳಿಗಿಂತಲೂ ಕಡಿಮೆ ಶಬ್ದ ಇದೆ. ಸುಖಕರ ಪ್ರಯಾಣಕ್ಕೆ ಪೂರಕವಾಗಿದೆ. ಮೊದಲ ಹಂತದಲ್ಲಿ ದೆಹಲಿ, ಉತ್ತರಪ್ರದೇಶ, ಹರಿಯಾಣ ಹಾಗೂ ರಾಜಸ್ಥಾನಗಳನ್ನು ನಮೋ ಭಾರತ್ ರೈಲು ಸಂಪರ್ಕಿಸಲಿದೆ ಎಂದು ತಿಳಿಸಿದರು.

ಮೂರನೇ ದಶಕದಲ್ಲಿ ಭಾರತೀಯ ರೈಲ್ವೆಗೆ ಕಾಯಕಲ್ಪ ನೀಡುವ ಅಗತ್ಯವಿದೆ. ಚಿಕ್ಕಕನಸು ಕಾಣಲು ನನಗೆ ಸಾಧ್ಯವಿಲ್ಲ. ಸಾಯುತ್ತ ತೆಳಲುವುದಿಲ್ಲ. ಈ ದಶಕದ ಕೊನೆಯಲ್ಲಿ ಭಾರತದ ರೈಲ್ವೆ ವಿಶ್ವದ ಯಾವುದೇ ರೈಲು ವ್ಯವಸ್ಥೆಗಿಂತಲೂ ಕಡಿಮೆ ಇರುವುದಿಲ್ಲ ಎಂದು ಭರವಸೆ ನೀಡಿದರು.

ನಮೋ ಭಾರತ್ ಶುರುವಾಗಿದೆ. ಇದಕ್ಕೂ ಮೊದಲು ವಂದೇ ಭಾರತ್ ಯೋಜನೆಯಡಿ ಆಧುನಿಕ ಸೌಲಭ್ಯ ಒದಗಿಸಲಾಗಿದೆ. ಅಮೃತ್ ಭಾರತ್, ಒಂದೇ ಭಾರತ್ ಸೇರಿದಂತೆ ಹಲವು ಯೋಜನೆಗಳ ಮೂಲಕ ಸಂಪರ್ಕ ಯೋಜನೆಗಳು ಸುಧಾರಿಸಲಾಗುತ್ತಿದೆ. ಬಹುಮಾದರಿ ಸೌಲಭ್ಯಗಳ ಮೂಲಕ ಸಂಪರ್ಕವನ್ನು ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು.

andolanait

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

9 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

9 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

10 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

10 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

10 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

10 hours ago