ಉತ್ತರ ಪ್ರದೇಶ : ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎಂದು ವಿಶ್ವಸಂಸ್ಥೆ ಜಾಗತಿಕ ಜನಸಂಖ್ಯಾ ಅಂದಾಜು ವರದಿ ನೀಡಿದ್ದು, ‘ಸರ್ಕಾರದ ವೈಫಲ್ಯತೆಯೇ ಭಾರತದಲ್ಲಿ ಜನಸಂಖ್ಯೆ ಹೆಚ್ಚಲು ಕಾರಣ‘ ಎಂದು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗುರುವಾರ ಹೇಳಿದ್ದಾರೆ.
ಕಳೆದ ದಿನ ಬಿಡುಗಡೆಯಾದ ವಿಶ್ವಸಂಸ್ಥೆ ಜಾಗತಿಕ ಜನಸಂಖ್ಯಾ ಅಂದಾಜು ವರದಿಯ ಅಂಕಿಅಂಶಗಳ ಪ್ರಕಾರ ಭಾರತವು 142.86 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಚೀನಾದ ಜನಸಂಖ್ಯೆಯಲ್ಲಿ ಕುಸಿತ ಕಂಡಿದೆ ಎಂದು ಈ ವರದಿ ಹೇಳಿತ್ತು. ಇನ್ನು ಮೂರು ದಶಕಗಳಲ್ಲಿ ಭಾರತದಲ್ಲಿ ಜನಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಈ ವರದಿ ಪ್ರಕಟಿಸಿತ್ತು,
ಈ ಬಗ್ಗೆ ಟ್ವೀಟ್ ಮಾಡಿರುವ ಅಖಿಲೇಶ್ ಯಾದವ್, ’ಆತಂಕಕಾರಿ ಸುದ್ದಿ: ಭಾರತದ ಜನಸಂಖ್ಯೆಯಲ್ಲಿ ಹೆಚ್ಚಳ. ಕಾರಣ: ಸರ್ಕಾರದ ವೈಫಲ್ಯ‘ ಎಂದು ಬರೆದುಕೊಂಡಿದ್ದಾರೆ.
‘ಬಡತನ ಮತ್ತು ನಿರುದ್ಯೋಗದಿಂದ ಜನರು ಹೆಚ್ಚು ಹೆಚ್ಚು ಮಕ್ಕಳನ್ನು ಪಡೆಯುತ್ತಿದ್ದಾರೆ. ಮಕ್ಕಳು ಕೆಲಸ ಮಾಡಿ ತಮ್ಮ ಕುಟುಂಬವನ್ನು ಸಲಹುತ್ತಾರೆ ಎಂಬ ಭಾವನೆ ಜನರಿಗಿದೆ. ಈ ಕಾರಣಕ್ಕೆ ಜನಸಂಖ್ಯೆ ಹೆಚ್ಚಳವಾಗಿದೆ‘ ಎಂದು ಯಾದವ್ ಹೇಳಿದ್ದಾರೆ.
‘ವೈದ್ಯಕೀಯ ಚಿಕಿತ್ಸೆಯ ಕೊರತೆಯಿಂದ ಶಿಶು ಮರಣದ ಹೊಂದುತ್ತಿದ್ದು, ಈ ಬಗ್ಗೆ ಜನರು ಭಯದಲ್ಲಿದ್ದಾರೆ. ಅಲ್ಲದೇ ಸರ್ಕಾರ ಗರ್ಭ ನಿರೋಧಕ ಮಾತ್ರೆಗಳನ್ನು ಸರಿಯಾಗಿ ವಿತರಿಸುತ್ತಿಲ್ಲ. ಶಿಕ್ಷಣದ ಕೊರತೆ ಜನಸಂಖ್ಯೆ ಹೆಚ್ಚಳಕ್ಕೆ ಇನ್ನೊಂದು ಕಾರಣವಾಗಿದೆ. ಸರಿಯಾದ ಶಿಕ್ಷಣವಿಲ್ಲದ ಕಾರಣ ಜನಸಂಖ್ಯೆಯ ಒತ್ತಡದ ಬಗ್ಗೆ ಜನರಿಗೆ ಜ್ಞಾನವಿಲ್ಲ‘ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…