ಬೆಂಗಳೂರು: ಪಂಚ ಗ್ಯಾರಂಟಿಗಳು ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೇಕ್ ನ್ಯೂಸ್‌ಗಳು ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವು ತಂದೊಡ್ಡಿದ್ದು, ಇದಕ್ಕೆ ಕಡಿವಾಣ ಹಾಕಲು ಉನ್ನತ ಮಟ್ಟದಲ್ಲೇ ಚಿಂತನೆಗಳು ನಡೆಯುತ್ತಿವೆ.
ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ, ಫೋಟೋ, ವಿಡಿಯೋ ಹಂಚಿಕೊಳ್ಳುವವ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಚಿವರ ಆಗ್ರಹದ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನು ನೀಡಿದ್ದಾರೆ.
ಫೇಕ್, ಪೋಟೋ ವಿಡಿಯೋ ಹಾವಳಿ
ಇತ್ತೀಚೆಗೆ ಪಂಚ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಜಾರಿಗೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಹಳೇ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಉಡುಪಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿ ಸಿಬ್ಬಂದಿ ಕಬ್ಬಡಿ ಆಟವಾಡಿದ ವಿಡಿಯೋವನ್ನು ವೈರಲ್ ಮಾಡಲಾಗಿತ್ತು.
ಈ ವಿಡಿಯೋದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಖಾಸಗಿ ಬಸ್ ಸಿಬ್ಬಂದಿ ಕೆಲಸ ಇಲ್ಲದೆ, ಪ್ರಯಾಣಿಕರಿಲ್ಲದೆ ಆಟವಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಉಲ್ಲೇಖ ಮಾಡಲಾಗಿತ್ತು. ಇದಷ್ಟೇ ಅಲ್ಲ, ಮಹಿಳಾ ಪ್ರಯಾಣಿಕರ ನೂಕುನುಗ್ಗಲಿನಿಂದ ಬಸ್‌ಗೆ ಹಾನಿಯಾದ ಕೆಲವು ಫೇಕ್ ಫೋಟೋಗಳನ್ನು ಹಂಚಿಕೊಳ್ಳಲಾಗಿತ್ತು.
ಅಧಿಕಾರಿಗಳಿಗೆ ಖಡಕ್ ಸೂಚನೆ
ಈ ಎಲ್ಲಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇದೀಗ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಗೃಹ ಸಚಿವರ ಜೊತೆಗೂ ಮಾತುಕತೆ
ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು, ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದಕ್ಕೆ ಕಡಿವಾಣ ಹಾಕುವ ಅಗತ್ಯ ಇದೆ ಎಂಬ ಚರ್ಚೆ ನಡೆದಿದೆ.
ಲೋಕಸಭಾ ಚುನಾವಣಾ ದೃಷ್ಟಿಯಿಂದ ಕ್ರಮ
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಫೇಕ್ ನ್ಯೂಸ್‌ಗಳಿಗೆ ಕಡಿವಾಣ ಹಾಕುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ಕಾರಣಕ್ಕಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.
ಕೈ ವಿರುದ್ಧವೂ ಕೇಳಿ ಬಂದಿದ್ದ ಫೇಕ್ ನ್ಯೂಸ್ ಆರೋಪ
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧವೂ ಫೇಕ್ ನ್ಯೂಸ್ ಸೃಷ್ಟಿ ಆರೋಪ ಕೇಳಿಬಂದಿತ್ತು. ಬಿಜೆಪಿಯ ಕೆಲವು ನಾಯಕರ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಫೇಕ್ ನ್ಯೂಸ್ ಸೃಷ್ಟಿ ಮಾಡಿದೆ ಎಂಬ ಆರೋಪ ಇತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ವಿರುದ್ಧವೂ ಕಾಂಗ್ರೆಸ್ ಆರೋಪ ಮಾಡಿತ್ತು. ಹಾಗಿದ್ದರೂ ವಿಧಾನಸಭೆ ಚುನಾವಣೆಯಲ್ಲಿ ಫೇಕ್ ಸುದ್ದಿಗಳು ಸಾಕಷ್ಟು ಸಮಸ್ಯೆಗಳ ಸೃಷ್ಟಿಗೆ ಕಾರಣವಾಗಿದ್ದವು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…