BREAKING NEWS

ಬೌದ್ದ ಧರ್ಮದ ವಿದಿ ವಿಧಾನದಂತೆ ಶ್ರೀನಿವಾಸ ಪ್ರಸಾದ್‌ ಅಂತ್ಯಕ್ರಿಯೆಗೆ ಕುಟುಂಬ ನಿರ್ಧಾರ !

ಮೈಸೂರು: ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿಧಿ ವಿಧಾನದಂತೆ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಚ್​.ಡಿ. ಕೋಟೆ ರಸ್ತೆಯಲ್ಲಿರುವ ಸಿಲ್ಕ್ ಫ್ಯಾಕ್ಟರಿ ಬಳಿಯ ಡಾ.ಅಂಬೇಡ್ಕರ್​ ಅವರ ಟ್ರಸ್ಟ್​ ಆವರಣದಲ್ಲಿ ನಡೆಯಲಿದೆ ಎಂದು ಶ್ರೀನಿವಾಸ್ ಪ್ರಸಾದ್ ಅವರ ಪುತ್ರಿ ಪ್ರತಿಮಾ ಪ್ರಸಾದ್​ ತಂದೆಯ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಭಾನುವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ತರಲಾಗಿದ್ದು. ಇಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಭೀಮ ಸದನದಲ್ಲಿ ಅಂತಿಮ ದರ್ಶನ: ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ಸಂಸದ ಶ್ರೀನಿವಾಸ್​ ಪ್ರಸಾದ್ ಅವರ ಮನೆ ಭೀಮ ಸದನದಲ್ಲಿ ಸೋಮವಾರ ಬೆಳಗ್ಗೆ 8.30 ರಿಂದ 1 ಗಂಟೆಯವರೆಗೆ ಕುಟುಂಬಸ್ಥರ ಹಾಗೂ ಕೆಲವು ಪ್ರಮುಖ ನಾಯಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ 1 ಗಂಟೆಯಿಂದ ಮಂಗಳವಾರ 1 ಗಂಟೆಯವರೆಗೆ ಅಶೋಕ್ ಪುರಂನಲ್ಲಿರುವ NTM ಶಾಲೆಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬಳಿಕ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಚ್​ಡಿ ಕೋಟೆ ರಸ್ತೆಯಲ್ಲಿರುವ ಸಿಲ್ಕ್ ಫ್ಯಾಕ್ಟರಿ ಬಳಿಯ ಡಾ.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ.

ಬೌದ್ಧ ಧರ್ಮದ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಸಲಾಗುವುದು. ನಮ್ಮ ತಂದೆ ಶ್ರೀನಿವಾಸ್ ಪ್ರಸಾದ್ ಬೌದ್ಧಧರ್ಮದ ಅನುಯಾಯಿ ಆಗಿದ್ದರು ಎಂದು ಅಂತ್ಯಕ್ರಿಯೆ ವಿಧಿ ವಿಧಾನದ ಬಗ್ಗೆ ಮಗಳು ಪ್ರತಿಮಾ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಗಣ್ಯರಿಂದ ಅಂತಿಮ ದರ್ಶನ: ಇಂದು ಅವರ ಜಯಲಕ್ಷ್ಮಿಪುರಂ ನಿವಾಸಕ್ಕೆ ಆಗಮಿಸಿ ಅವರ ಅಂತಿಮ ದರ್ಶನವನ್ನು ಚಾಮರಾಜನಗರದ ಶಾಸಕ ಪುಟ್ಟರಂಗಶೆಟ್ಟಿ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ, ಸುತ್ತೂರು ಶ್ರೀಗಳು, ಸಾಹಿತಿ ದೇವನೂರು ಮಹಾದೇವ, ಎಂಎಲ್ಸಿ ಹೆಚ್​. ವಿಶ್ವನಾಥ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

55 mins ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

2 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

3 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

6 hours ago

ನಾಳೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…

6 hours ago

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

7 hours ago