BREAKING NEWS

ಖ್ಯಾತ ಗಾಯಕಿ, ರಾಷ್ಟ್ರಪ್ರಶಸ್ತಿ ವಿಜೇತೆ ವಾಣಿ ಜಯರಾಮ್ ಇನ್ನಿಲ್ಲ

ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ, ರಾಷ್ಟ್ರಪ್ರಶಸ್ತಿ ವಿಜೇತೆ ವಾಣಿ ಜಯರಾಮ್ (78) ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಕಲೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವಾಣಿ ಜಯರಾಮ್‌ ಅವರಿಗೆ 2023ನೇ ಸಾಲಿನ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ವಾಣಿ ಅವರು ಸಿನಿಮಾ ಹಿನ್ನೆಲೆ ಗಾಯಕಿಯಾಗಿದ್ದು, ಕನ್ನಡ, ತಮಿಳು ಹಾಗೂ ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡಿದ್ದಾರೆ.
ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.

ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು.
ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು.   ಕನ್ನಡದಲ್ಲಿ ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ, ಮಲಯ ಮಾರುತ ಸೇರಿದಂತೆ ಐವತ್ತಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಚಿತ್ರಕ್ಕೆ ಹಾಡಿದ ಹೆಗ್ಗಳಿಕೆ ಇವರದ್ದು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago