ಕೃಷಿ ಕಾಯ್ದೆಗಳಿಗೆ ವಿರೋಧ: ನೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ಹೊಸದಿಲ್ಲಿ: ಕೇಂದ್ರದ ಮೂರು ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಭಾಗಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 100ನೇ ದಿನಕ್ಕೆ ಕಾಲಿಟ್ಟಿದೆ.

ಇದರ ಅಂಗವಾಗಿ ರೈತರು ದೆಹಲಿ ಹೊರಭಾಗದಲ್ಲಿರುವ ಆರು ಪಥದ ಎಕ್ಸ್‌ಪ್ರೆಸ್‌ ಹೆದ್ದಾರಿ ಬಂದ್‌ ಮಾಡಿ ಸರ್ಕಾರಕ್ಕೆ ಒತ್ತಡ ಹಾಕಲು ಮುಂದಾಗಿದ್ದಾರೆ.

ಕಾರು, ಲಾರಿ ಮತ್ತು ಟ್ರ್ಯಾಕ್ಟರ್‌ಗಳನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸುತ್ತಿದ್ದು, 4-5 ಗಂಟೆಗಳ ಕಾಲ ಸಂಚಾರ ಬಂದ್ ಮಾಡುತ್ತಿದ್ದಾರೆ.
ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕಳೆದ ವರ್ಷದ ಡಿಸೆಂಬರ್‌ ತಿಂಗಳಿನಿಂದ ರೈತರು ದೆಹಲಿ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

× Chat with us