ಬೆಂಗಳೂರು : ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ಕ್ರಮಕೈಗೊಂಡಿಲ್ಲ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.
ಕಳೆದ ಬಾರಿಗಿಂತ ಈ ಬಾರಿ ರೈತರ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ಹಾವೇರಿ ಜಿಲ್ಲೆಯಲ್ಲಿ 6 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸುಳ್ಳು. ಇದು ಅಧಿಕಾರಿಗಳು, ಪೊಲೀಸ್ ವರದಿಗಳಿಂದ ಬಂದಿರುವ ಮಾಹಿತಿ ಎಂದು ರೈತರ ಆತ್ಮಹತ್ಯೆ ಪ್ರಕರಣದ ಅಂಕಿ ಅಂಶ ಬಿಡುಗಡೆ ಮಾಡಿದರು.
ರೈತರ ಆತ್ಮಹತ್ಯೆ ಕೇಸ್ನಲ್ಲೂ ರಾಜಕಾರಣ ಬೆರೆಸುವುದು ಒಳ್ಳೆಯದಲ್ಲ: ವಿಧಾನಸೌಧದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ಅನೇಕ ಕ್ರಮ ಕೈಗೊಂಡಿದೆ. ಹಾವೇರಿ ಜಿಲ್ಲೆಯಲ್ಲಿ ಮಳೆಯೂ ಜಾಸ್ತಿ ಆಗಿದ್ದು, ಶೇಕಡಾ 80ರಷ್ಟು ಬಿತ್ತನೆ ಕಾರ್ಯ ಆಗಿದೆ. ರಸಗೊಬ್ಬರ, ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ, ಅಲ್ಲಿ ಗಲಾಟೆ ಆಗಿಲ್ಲ. ಒಬ್ಬ ರೈತನ ಸಾವಿಗೂ ಬೆಲೆ ಇದೆ, ಎಲ್ಲರ ಜೀವಕ್ಕೂ ಬೆಲೆ ಇದೆ. ರೈತರ ಆತ್ಮಹತ್ಯೆ ಕೇಸ್ನಲ್ಲೂ ರಾಜಕಾರಣ ಬೆರೆಸುವುದು ಒಳ್ಳೆಯದಲ್ಲ. ಪಕ್ಷಾತೀತವಾಗಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಟಾಂಗ್ ನೀಡಿದರು.
ರೈತರ ಆತ್ಮಹತ್ಯೆ ಪ್ರಕರಣದ ಅಂಕಿ-ಅಂಶ: 2018-19ರಲ್ಲಿ 1085 ರೈತರು, 2019-20ರಲ್ಲಿ 1091 ರೈತರು, 2020-21ರಲ್ಲಿ 855 ರೈತರು, 2021-22ರಲ್ಲಿ 915 ರೈತರ ಆತ್ಮಹತ್ಯೆ ಆಗಿದೆ. 2022-23ರಲ್ಲಿ 755 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಪ್ರಿಲ್ 1ರಿಂದ ಈವರೆಗೆ 96 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡಿಲ್ಲ: ಎಚ್‌ಡಿಕೆ
ರೈತರ ಆತ್ಮಹತ್ಯೆ ವಿಚಾರವಾಗಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದು, 5 ಅಷ್ಟೇ ಅಲ್ಲ, ಇನ್ನೂ 5 ಗ್ಯಾರಂಟಿ ಕೊಡಲಿ ನಮ್ಮ ಬೆಂಬಲವಿದೆ. ಆದರೆ ಶಿಸ್ತುಬದ್ಧವಾಗಿ ತೆಗೆದುಕೊಂಡು ಹೋಗುವ ವಾತಾವರಣ ಇಲ್ಲ. ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬಿಲ್ಲ. ನಾವಿದ್ದೇವೆ ಎನ್ನುವ ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡಿಲ್ಲ.
ಬರೀ ಗ್ಯಾರಂಟಿಗಳ ಕಥೆ ಹೇಳಿಕೊಂಡು ಕಾಂಗ್ರೆಸ್ನವರು ಹೊರಟಿದ್ದಾರೆ. ಇತಿಹಾಸದಲ್ಲೇ ಆಗದ ವರ್ಗಾವಣೆ ಲೂಟಿ ಈ ಎರಡೇ ತಿಂಗಳಲ್ಲಿ ಆಗಿದೆ. ಆ ಕೋಟ್ಯಂತರ ದುಡ್ಡು ವಸೂಲಿ ಜನಸಾಮಾನ್ಯರ ಮೇಲೆ ಬೀಳಲಿದೆ ಎಂದು ಹೇಳಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…