ತಿ. ನರಸೀಪುರದಲ್ಲಿ ದಾರುಣ ಘಟನೆಯಿಂದ ಅನಾಥವಾಯಿತು ಕುಟುಂಬ
ತಿ. ನರಸೀಪುರ: ತಾಲೂಕಿನ ನಿಲ್ಲಸೋಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಂದೆ ಮಗ ಸೇರಿ ಮೂವರು ರೈತರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ.
ರಾಜೇಗೌಡ ಅಲಿಯಾಸ್ ರಾಚಯ್ಯ (60), ಮಗ ಹರೀಶ (30), ಮಹದೇವಸ್ವಾಮಿ( 40) ಮೃತಪಟ್ಟವರು. ರಾಜೇಗೌಡರ ಜಮೀನಿನಲ್ಲಿ ಕ್ರಿಮಿನಾಶಕ ಹೊಡೆಯಲು ಹೋದಾಗ ಈ ಘಟನೆ ನಡೆದಿದೆ. ಬೆಳಗ್ಗೆ 7.30ಕ್ಕೆ ಮೂವರು ಹೊಲಕ್ಕೆ ಔಷಧ ಹೊಡೆಯಲು ಹೋಗಿದ್ದರು. ಕೆಳಭಾಗದಿಂದ ಔಷಧ ಹೊಡೆದುಕೊಂಡು ಗದ್ದೆಯ ಮೇಲ್ಭಾಗಕ್ಕೆ ಹೋದಾಗ ರಾಚಯ್ಯ ಅವರು ಪಾತಿ ಮೇಲೆ ತುಂಡಾಗಿ ಬಿದ್ದ ತಂತಿಯನ್ನು ತುಳಿದಿದ್ದರು. ಅವರು ಕಿರುಚಿಕೊಂಡಾಗ ಸಹಾಯಕ್ಕೆ ಧಾವಿಸಿದ ಮಗ ಹರೀಶ ಅವರೂ ವಿದ್ಯುತ್ ತಗುಲಿ ಮೃತಪಟ್ಟರು. ಇದನ್ನು ಗಮನಿಸದೇ ಸಹಾಯಕ್ಕೆ ಹೋದ ಮಹದೇವಸ್ವಾಮಿ ಅವರೂ ಸ್ಥಳದಲ್ಲೇ ಮೃತಪಟ್ಟರು. ಹರೀಶ ಅವರು ರಾಚಯ್ಯ (60) ಅವರ ಒಬ್ಬನೇ ಮಗನಾಗಿದ್ದು ಆಧಾರ ಸ್ತಂಭಗಳನ್ನು ಕಳೆದುಕೊಂಡು ಕುಟುಂಬ ಅನಾಥವಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
ಶಾಸಕ ಅಶ್ವಿನ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಚೆಸ್ಕಾಂ ಅಧಿಕಾರಿಗಳು ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು. ಉಸ್ತುವಾರಿ ಸಚಿವರ ಜತೆ ಮಾತನಾಡಿ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…