ಚಿಕ್ಕಬಳ್ಳಾಪುರ : ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂವು ಕೀಳಲು ಹೋಗಿ ಕೆರೆಗೆ ಇಳಿದಿದ್ದ ತಂದೆ ಮತ್ತು ಮಗ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಂದೆ ಪುಟ್ಟರಾಜು (42) ಹಾಗೂ ಮಗ ಕೇಶವ (14) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ದುರ್ದೈವಿಗಳು.
ಮೃತರು ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳು. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ವ್ಯಾಪಾರಕ್ಕಾಗಿ ಬುಧವಾರ ಸಂಜೆ ಭೂಚನಹಳ್ಳಿ ಬಳಿಯ ಕೆರೆಗೆ ತಾವರೆ ಹೂ ಕೀಳಲು ಹೋಗಿದ್ದರು.
ಕೆರೆಯ ದಡದಲ್ಲಿ ಮೊಬೈಲ್, ಚಪ್ಪಲಿ ಬಿಟ್ಟು ತಾವರೆ ಹೂ ಕೀಳಲು ತಂದೆ, ಮಗ ಮುಂದಾದಾಗ ಅವಘಡ ಸಂಭವಿಸಿದೆ. ಮತ್ತೊಬ್ಬ ತಾವರೆ ಹೂ ಮಾರಾಟಗಾರ ಕೆರೆಯ ಬಳಿ ಹೋದಾಗ ಇಬ್ಬರು ಕೆರೆಯಲ್ಲಿ ಮುಳುಗಿರುವುದು ತಿಳಿದುಬಂದಿದೆ.
ಇದೀಗ ಅಗ್ನಿಶಾಮಕ ದಳ ಸಿಬ್ಬಂದಿ ಕೆರೆಯಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಘಟನೆ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…