Mysore
21
overcast clouds

Social Media

ಮಂಗಳವಾರ, 10 ಡಿಸೆಂಬರ್ 2024
Light
Dark

ಗಂಡನ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಫೇಸ್‌ಬುಕ್‌ ಲೈವ್‌ ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಹೈದರಾಬಾದ್ : ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಫೇಸ್‌ ಬುಕ್‌ ಲೈವ್‌ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಟೆಕ್ಕಿಯಾಗಿದ್ದ ಮಹಿಳೆ, ನನ್ನ ಗಂಡನಿಗೆ ವಿವಾಹೇತರ ಸಂಬಂಧವಿದೆ ಎಂದು ಆರೋಪಿಸಿ ಫೇಸ್‌ಬುಕ್ ಲೈವ್‌ನಲ್ಲೇ ಆತ್ಮಹತ್ಯೆಮಾಡಿಕೊಂಡಿದ್ದಾರೆ. ಹೈದರಾಬಾದ್ ಮೂಲದ ಸನಾ( 32) ಮೃತ ಮಹಿಳೆ. ಕಳೆದ 5 ವರ್ಷಗಳ ಹಿಂದೆ ಸನಾ ತನ್ನ ಶಾಲಾ ಸಹಪಾಠಿಯಾಗಿದ್ದ ಹೇಮಂತ್‌ ಎನ್ನುವವರನ್ನು ವಿವಾಹವಾಗಿದ್ದರು. ಆ ಸಮಯದಲ್ಲಿ ಹೇಮಂತ್ ನಿರುದ್ಯೋಗಿಯಾಗಿದ್ದರು. ಸನಾ ಆಗ ದೆಹಲಿಯ ಏರ್‌ಲೈನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ವಿವಾಹದ ಬಳಿಕ ಹೇಮಂತ್‌ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದ. ಇದೇ ಕಾರಣದಿಂದ ಬೇಸತ್ತು ಹೋಗಿದ್ದ ಸನಾ ಫೇಸ್‌ ಬುಕ್‌ ಲೈವ್‌ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರು ಗಂಡನ ವಿರುದ್ಧ ಕಿರುಕುಳದ ಆರೋಪವನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸನಾ ಮನೆಯವರು ಆಕೆಯ ಆತ್ಮಹತ್ಯೆಗೆ ಹೇಮಂತ್ ಕಾರಣ ಎಂದು ಆರೋಪಿಸಿದ್ದಾರೆ. ಪ್ರಸ್ತುತ, ಹೇಮಂತ್ ಅವರು ಅಬಿಡ್ಸ್ ವಾಣಿಜ್ಯ ಕೇಂದ್ರದಲ್ಲಿ ಡಿಸ್ಕ್ ಜಾಕಿಯಾಗಿ (ಡಿಜೆ) ಕೆಲಸ ಮಾಡುತ್ತಿದ್ದಾರೆ ಮತ್ತು ಡಿಜೆ ಆಗಿರುವ ಇನ್ನೊಬ್ಬ ಮಹಿಳೆಯೊಂದಿಗೆ ವಿವಾಹೇತರ ಸಂಬಂಧದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರ ಸಹೋದರ ಹೇಳಿದರು. ಹೇಮಂತ್ ಹಾಗೂ ಆತನ ಪೋಷಕರ ವಿರುದ್ಧ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ನಾಚಾರಂ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ