ರಿಲಯನ್ಸ್ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ- 1999 (ಫೆಮಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ತನಿಖಾ ಸಂಸ್ಥೆ ಮುಂದೆ ಹಾಜರಾಗಿದ್ದರು ಎಂದು ವರದಿಗಳು ತಿಳಿಸಿವೆ.
ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ 64 ವರ್ಷದ ಅನಿಲ್ ಅಂಬಾನಿ ಬಂದಿದ್ದರು ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಹೊಸ ಪ್ರಕರಣದ ಭಾಗವಾಗಿ ಅನಿಲ್ ಅಂಬಾನಿ ಹೇಳಿಕೆಯನ್ನು ದಾಖಲಿಸಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿ. ಮುಖ್ಯಸ್ಥ, ಏಷ್ಯಾದ ನಂ.1 ಶ್ರೀಮಂತ ಮುಕೇಶ್ ಅಂಬಾನಿ ಅವರ ಸಹೋದರನಾಗಿರುವ ಅನಿಲ್ ಅಂಬಾನಿ ಅವರು ಬೆಳಿಗ್ಗೆ 10 ಗಂಟೆಗೆ ಜಾರಿ ನಿರ್ದೇಶನಾಲಯದ ಮುಂಬೈ ಕಚೇರಿಯನ್ನು ತಲುಪಿದ್ದರು. ಅವರನ್ನು ವಿಚಾರಣೆ ನಡೆಸುತ್ತಿದ್ದಾಗ ಅವರ ಕಚೇರಿ ಸಿಬ್ಬಂದಿ ಹೊರಗೆ ಅವರಿಗಾಗಿ ಕಾಯುತ್ತಿದ್ದರು ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.
ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣದಲ್ಲಿಯೂ ಈ ಹಿಂದೆ 2020ರಲ್ಲಿ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ಕಳೆದ ವರ್ಷದ ಆಗಸ್ಟ್‌ನಲ್ಲಿ ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿದ್ದ 814 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ಹಣದ ಮೇಲಿನ 420 ಕೋಟಿ ರೂ. ತೆರಿಗೆ ವಂಚನೆ ಆರೋಪದಡಿ ಅನಿಲ್ ಅಂಬಾನಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿತ್ತು. ಕಪ್ಪುಹಣ ತಡೆ ಕಾಯ್ದೆಯಡಿ ಈ ನೋಟಿಸ್ ನೀಡಲಾಗಿತ್ತು.
ಬಾಂಬೆ ಹೈಕೋರ್ಟ್ ಮಾರ್ಚ್‌ನಲ್ಲಿ ಈ ಐಟಿ ಶೋಕಾಸ್ ನೋಟಿಸ್ ಮತ್ತು ದಂಡದ ಬೇಡಿಕೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದರಿಂದ ಅನಿಲ್ ಅಂಬಾನಿ ಒಂದಿಷ್ಟು ನಿಟ್ಟುಸಿರು ಬಿಟ್ಟಿದ್ದರು.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…