ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿರುಮಲಶೆಟ್ಟಿಹಳ್ಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ.ಶ್ರೀನಿವಾಸ್ರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚೆನ್ನಸಂದ್ರ ಗ್ರಾಮದಲ್ಲಿ ಅಡಗಿದ್ದ ಡಾ.ಶ್ರೀನಿವಾಸ್ ಅಡಗಿದ್ದು, ಆತನನನ್ನು ಪೊಲೀಸರು ಬಂಧಿಸಿದ್ದಾರೆ.
ಇವರನ್ನು ಸೇರಿದಂತೆ ಐವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು (ಎ1), ಎ2 ನರ್ಸ್ ಅನಿತಾ, ಎ3 ನರ್ಸ್ ನೇತ್ರಾ, ಎ4 ರೇವತಿ, ಎ5 ರಾಧಿಕಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರು, ಮಂಡ್ಯದಲ್ಲಷ್ಟೇ ಅಲ್ಲದೇ ಬೆಂಗಳೂರಿನ ಮಡಿಲಲ್ಲೇ ಭ್ರೂಣ ಹತ್ಯೆ ಕೃತ್ಯ ನಡೆದಿತ್ತು. ಇದು ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.
ಒಂದಲ್ಲ, ಎರಡಲ್ಲ, 14 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬಯಲಾಗಿದೆ. ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಬಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಅಬಾರ್ಷನ್ ವೇಳೆ ರೆಡ್ ಹ್ಯಾಂಡ್ ಆಗಿ ವೈದ್ಯರು ಸಿಕ್ಕಿಬಿದ್ದಿದ್ದರು. ಎಸ್ಪಿಜಿ ಆಸ್ಪತ್ರೆಯಲ್ಲೇ ನಡೆದಿದ್ದ ರಕ್ತಸಿಕ್ತ ದಂಧೆ ಬೆಚ್ಚಿ ಬೀಳುವಂತಿತ್ತು.
ಖಾಸಗಿ ಕ್ಲಿನಿಕ್ನಲ್ಲಿ ಅಕ್ರಮ ಸ್ಕ್ಯಾನಿಂಗ್ ಮಿಷನ್ ಪತ್ತೆ ಆಗಿದ್ದವು. ಕೆಪಿಎಂಇ ಆಕ್ಟ್ ಪಾಲನೆ ಬಗ್ಗೆ ಪರಿಶೀಲನೆಗೆ ಬಂದಿದ್ದ ವೇಳೆ ಮಿಷನ್ ಪತ್ತೆಯಾಗಿದ್ದವು. ಸ್ಕ್ಯಾನಿಂಗ್ ಮಿಷನ್ ಹಿನ್ನೆಲೆ ಹುಡುಕಿ ಹೊರಟಾಗ ಭ್ರೂಣ ಹತ್ಯೆ ಬಯಲಾಗಿತ್ತು.
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…
ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…
ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…