ಮೈಸೂರು: ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳು ಬಿಗಿಯಾಗಿದ್ದರೆ ಮಾತ್ರ ನಿಮ್ಮ ಕೆಳಗಿನ ಅಧಿಕಾರಿಗಳು ಜವಾಬ್ದಾರಿಯಿಂದ ಇರುತ್ತಾರೆ. ನೀವೇ ಮೈಗಳ್ಳರಾದರೆ ಕೆಳಗಿನವರು ಸೋಮಾರಿಗಳಾಗುತ್ತಾರೆ. ಡಿಸಿ, ಎಸ್‌ಪಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಕಡ್ಡಾಯವಾಗಿ ಫೀಲ್ಡ್ ವರ್ಕ್ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಶನಿವಾರ ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ್ದಾರೆ.
ನಾಡಿನ ಜನತೆ ಬದಲಾವಣೆ ಬಯಸಿ ಸರ್ಕಾರವನ್ನು ಬದಲಾಯಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ದಕ್ಷವಾಗಿ, ಚುರುಕಾಗಿ ಕೆಲಸ ಮಾಡಿ. ಹೆಚ್ಚೂ ಕಡಿಮೆ ಆದರೆ ನಿಮ್ಮಗಳ ಮೇಲೆ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ. ಕೆಡಿಪಿ ಸಭೆಗಳಿಗೆ ಸಂಪೂರ್ಣ ಫೀಲ್ಡ್ ವರ್ಕ್ ಮಾಡಿದ ವರದಿ ಸಮೇತ ಸಮಗ್ರ ಮಾಹಿತಿಯೊಂದಿಗೆ ಬರಬೇಕು. ಕೈ ಬೀಸಿಕೊಂಡು ಬರಬಾರದು ಎಂದು ಖಡಕ್ ಸೂಚನೆ ನೀಡಿದರು.
ರೈತರನ್ನು ಕಚೇರಿಗೆ ಅಲೆಸಬೇಡಿ: ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆ ಚುರುಕಾಗುತ್ತದೆ. ಇದಕ್ಕೆ ತಕ್ಕಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಿ. ಕೃಷಿ ಕೆಲಸ ಇದ್ದಾಗ ರೈತರನ್ನು ಕಚೇರಿಗಳಿಗೆ ಅಲೆಯುವಂತೆ ಮಾಡಬೇಡಿ. ಬೀಜ, ಗೊಬ್ಬರ, ಕೀಟನಾಶಕ ಅಗತ್ಯ ಪ್ರಮಾಣದಲ್ಲಿ ಶೇಖರಿಸಿ ಇಟ್ಟುಕೊಂಡು ರೈತರಿಗೆ ನೆರವಾಗಿ. ಯಾವುದಕ್ಕೂ ಹಣದ ಕೊರತೆ ಇಲ್ಲ. ನಿಮ್ಮಲ್ಲಿ ಕೊರತೆ ಇದ್ದರೆ ನಮಗೆ ಕೇಳಿ. ನಿಮ್ಮಿಂದ ಏನೇ ಲೋಪ ಆಗಿ ಬೆಳೆಗಳಿಗೆ ಮತ್ತು ರೈತರಿಗೆ ತೊಂದರೆ ಆದರೆ ನಿಮ್ಮನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ ಕೊಟ್ಟರು.
ಜನರಿಗೆ ಸಮಸ್ಯೆಯಾದರೆ ಮುಲಾಜಿಲ್ಲದೆ ಕ್ರಮ: ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಕೊರತೆಯನ್ನು ಮೊದಲೇ ಅಂದಾಜಿಸಿ ಅಗತ್ಯ ನೆರವಿನ ನೀಲನಕ್ಷೆ ಸಿದ್ದಪಡಿಸಿಕೊಳ್ಳಿ. ನಿಮ್ಮ ಲೋಪದಿಂದ ಜನರಿಗೆ ಸಮಸ್ಯೆ ಆದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಗ್ಯಾರಂಟಿಗಳನ್ನು ಬಡವರಿಗೆ-ಮಧ್ಯಮ ವರ್ಗದವರಿಗೆ ತಲುಪಿಸಿ: ನಮ್ಮ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ಅವರ ಸಂಕಷ್ಟ ಕಡಿಮೆ ಆಗಲಿ ಎಂದು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆದ್ದರಿಂದ ಅತ್ಯಂತ ಕಾಳಜಿ ವಹಿಸಿ ಹೆಚ್ಚಿನ ಕಾರ್ಯಕ್ಷಮತೆಯಿಂದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿ ಎಂದು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಜಿಲ್ಲೆಯ ಎಲ್ಲಾ ಶಾಸಕರುಗಳು ಉಪಸ್ಥಿತರಿದ್ದರು.
ಅಧಿಕಾರಿಗಳಿಗೆ ಸಿದ್ದರಾಮಯ್ಯ ನೀಡಿದ ಪ್ರಮುಖ ಸೂಚನೆಗಳಿವು
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…
ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…