BREAKING NEWS

ಎಸ್‌ಪಿ, ಸಿಇಒ, ಡಿಸಿಗಳಿಗೆ ಫೀಲ್ಡ್ ವರ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಮೈಸೂರು:  ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳು ಬಿಗಿಯಾಗಿದ್ದರೆ ಮಾತ್ರ ನಿಮ್ಮ ಕೆಳಗಿನ ಅಧಿಕಾರಿಗಳು ಜವಾಬ್ದಾರಿಯಿಂದ ಇರುತ್ತಾರೆ. ನೀವೇ ಮೈಗಳ್ಳರಾದರೆ ಕೆಳಗಿನವರು ಸೋಮಾರಿಗಳಾಗುತ್ತಾರೆ. ಡಿಸಿ, ಎಸ್‌ಪಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಕಡ್ಡಾಯವಾಗಿ ಫೀಲ್ಡ್‌ ವರ್ಕ್‌ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಶನಿವಾರ ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ್ದಾರೆ.

ನಾಡಿನ ಜನತೆ ಬದಲಾವಣೆ ಬಯಸಿ ಸರ್ಕಾರವನ್ನು ಬದಲಾಯಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ದಕ್ಷವಾಗಿ, ಚುರುಕಾಗಿ ಕೆಲಸ ಮಾಡಿ. ಹೆಚ್ಚೂ ಕಡಿಮೆ ಆದರೆ ನಿಮ್ಮಗಳ ಮೇಲೆ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ. ಕೆಡಿಪಿ ಸಭೆಗಳಿಗೆ ಸಂಪೂರ್ಣ ಫೀಲ್ಡ್ ವರ್ಕ್ ಮಾಡಿದ ವರದಿ ಸಮೇತ ಸಮಗ್ರ ಮಾಹಿತಿಯೊಂದಿಗೆ ಬರಬೇಕು. ಕೈ ಬೀಸಿಕೊಂಡು ಬರಬಾರದು ಎಂದು ಖಡಕ್ ಸೂಚನೆ ನೀಡಿದರು.

ರೈತರನ್ನು ಕಚೇರಿಗೆ ಅಲೆಸಬೇಡಿ: ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆ ಚುರುಕಾಗುತ್ತದೆ. ಇದಕ್ಕೆ ತಕ್ಕಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಿ. ಕೃಷಿ ಕೆಲಸ ಇದ್ದಾಗ ರೈತರನ್ನು ಕಚೇರಿಗಳಿಗೆ ಅಲೆಯುವಂತೆ ಮಾಡಬೇಡಿ. ಬೀಜ, ಗೊಬ್ಬರ, ಕೀಟನಾಶಕ ಅಗತ್ಯ ಪ್ರಮಾಣದಲ್ಲಿ ಶೇಖರಿಸಿ ಇಟ್ಟುಕೊಂಡು ರೈತರಿಗೆ ನೆರವಾಗಿ. ಯಾವುದಕ್ಕೂ ಹಣದ ಕೊರತೆ ಇಲ್ಲ. ನಿಮ್ಮಲ್ಲಿ ಕೊರತೆ ಇದ್ದರೆ ನಮಗೆ ಕೇಳಿ. ನಿಮ್ಮಿಂದ ಏನೇ ಲೋಪ ಆಗಿ ಬೆಳೆಗಳಿಗೆ ಮತ್ತು ರೈತರಿಗೆ ತೊಂದರೆ ಆದರೆ ನಿಮ್ಮನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ ಕೊಟ್ಟರು.

ಜನರಿಗೆ ಸಮಸ್ಯೆಯಾದರೆ ಮುಲಾಜಿಲ್ಲದೆ ಕ್ರಮ: ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಕೊರತೆಯನ್ನು ಮೊದಲೇ ಅಂದಾಜಿಸಿ ಅಗತ್ಯ ನೆರವಿನ ನೀಲನಕ್ಷೆ ಸಿದ್ದಪಡಿಸಿಕೊಳ್ಳಿ. ನಿಮ್ಮ ಲೋಪದಿಂದ ಜನರಿಗೆ ಸಮಸ್ಯೆ‌ ಆದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಗ್ಯಾರಂಟಿಗಳನ್ನು ಬಡವರಿಗೆ-ಮಧ್ಯಮ ವರ್ಗದವರಿಗೆ ತಲುಪಿಸಿ: ನಮ್ಮ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ಅವರ ಸಂಕಷ್ಟ ಕಡಿಮೆ ಆಗಲಿ ಎಂದು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆದ್ದರಿಂದ ಅತ್ಯಂತ ಕಾಳಜಿ ವಹಿಸಿ ಹೆಚ್ಚಿನ ಕಾರ್ಯಕ್ಷಮತೆಯಿಂದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿ ಎಂದು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಜಿಲ್ಲೆಯ ಎಲ್ಲಾ ಶಾಸಕರುಗಳು ಉಪಸ್ಥಿತರಿದ್ದರು.

ಅಧಿಕಾರಿಗಳಿಗೆ ಸಿದ್ದರಾಮಯ್ಯ ನೀಡಿದ ಪ್ರಮುಖ ಸೂಚನೆಗಳಿವು

  • ಅಧಿಕಾರಿಗಳು ಕಡ್ಡಾಯವಾಗಿ ಫೀಲ್ಡ್ ವರ್ಕ್ ಮಾಡಬೇಕು. ಬರೀ ಕಚೇರಿಯಲ್ಲಿ ಕುಳಿತು ವರದಿ ಸಿದ್ದಪಡಿಸಬಾರದು.
  • ಎಸ್‌ಪಿ ಗಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
  • ಠಾಣಾಧಿಕಾರಿ ಗಮನಕ್ಕೆ ಬಾರದಂತೆ ಠಾಣೆ ವ್ಯಾಪ್ತಿಯಲ್ಲಿ ರೌಡಿ ಚಟುವಟಿಕೆ, ಅಕ್ರಮ ಚಟುವಟಿಕೆಗಳು ನಡೆಯಲು ಸಾಧ್ಯವಿಲ್ಲ. ಪೊಲೀಸರ ಬಗ್ಗೆ ರೌಡಿಗಳಿಗೆ ಭಯ ಇಲ್ಲದಿದ್ದರೆ ಪೊಲೀಸರು ಇದ್ದರೇನು, ಬಿಟ್ಟರೇನು?
  • ತಹಶೀಲ್ದಾರ್ ಕಚೇರಿಗಳಲ್ಲಿ ಎಷ್ಟು ಲಂಚ ನಡೆಯುತ್ತಿದೆ, ರೈತರಿಗೆ ಎಷ್ಟು ಗೋಳಾಡಿಸುತ್ತಿದ್ದಾರೆ ಎನ್ನುವುದು ಗೊತ್ತಾ ಜಿಲ್ಲಾಧಿಕಾರಿಗಳೇ ? ಆ ಬಗ್ಗೆ ಕ್ರಮಕೈಗೊಳ್ಳಿ.
  • ಕಳೆದ ವರ್ಷ ಬೆಳೆ ಹಾನಿ ಆದ ಎಲ್ಲರಿಗೂ ಸಮರ್ಪಕವಾಗಿ ಪರಿಹಾರ ವಿತರಿಸಬೇಕು. ತಾಂತ್ರಿಕ ಸಮಸ್ಯೆ ಕಾರಣದಿಂದ ಯಾರಿಗಾದರೂ ಪರಿಹಾರ ದೊರಕದಿದ್ದರೆ, ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ ಪರಿಹಾರ ವಿತರಿಸಿ.
  • ಜೂನ್ ಆರಂಭದಲ್ಲಿ ಬರಬೇಕಾದ ಮಳೆ ಬಂದಿಲ್ಲ. ಇದರಿಂದ ಕುಡಿಯುವ ನೀರು ಮತ್ತು ಬೆಳೆಗೆ ನೀರು ಕೊರತೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಿ.
  • ಮಳೆ ಬರುವವರೆಗೆ ಬೆಳೆಗಳಿಗೆ ಅಗತ್ಯ ನೀರು ಒದಗಿಸಿ, ಬೆಳೆ ನಷ್ಟ ಆಗದಂತೆ ಕ್ರಮ ವಹಿಸಿ. ಪ್ರಥಮ ಆಧ್ಯತೆ ಕುಡಿಯುವ ನೀರಿಗೆ ಒದಗಿಸಿ.
andolanait

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

14 mins ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

5 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

5 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

5 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

5 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

8 hours ago