ಮುಜಾಫರ್‌ಪುರ : ಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ.
ಮುಜಾಫರ್‌ಪುರ ಮೂಲದ ವಕೀಲ ಸುಧೀರ್ ಕುಮಾರ್ ಓಜಾ, ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪಂಕಜ್ ಕುಮಾರ್ ಲಾಲ್ ಅವರ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದು, ಈ ಹೇಳಿಕೆಗಳು ಹಿಂದೂ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದಾರೆ.
ರಾಜಕೀಯ ದಿಗ್ಗಜರು ಮತ್ತು ಇತರ ಸೆಲೆಬ್ರಿಟಿಗಳ ವಿರುದ್ಧದ ದೂರುಗಳಿಗಾಗಿ ಸುದ್ದಿಯಲ್ಲಿರುವ ಓಜಾ, ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ತಮಿಳುನಾಡು ಸಿಎಂ ಮತ್ತು ಕ್ಯಾಬಿನೆಟ್ ಸಚಿವರೂ ಆಗಿರುವ ಅವರ ಪುತ್ರನನ್ನು ವಿಚಾರಣೆಗೆ ಒಳಪಡಿಸುವಂತೆ ಕೋರಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 14 ಕ್ಕೆ ಮುಂದೂಡಲಾಗಿದೆ.
ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ತಮಿಳುನಾಡು ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ , ಸನಾತನ ಧರ್ಮ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಶನಿವಾರ ಆರೋಪಿಸಿದ್ದರು. ಅಲ್ಲದೇ, ಅದನ್ನು ಕೊರೊನಾವೈರಸ್, ಮಲೇರಿಯಾ, ಡೆಂಗ್ಯೂ ವೈರಸ್ ಮತ್ತು ಸೊಳ್ಳೆಗಳಿಂದ ಉಂಟಾಗುವ ಜ್ವರಕ್ಕೆ ಹೋಲಿಸಿದ್ದರು.
ಉದಯ್ ಸ್ಟಾಲಿನ್ ಅವರ ಹೇಳಿಕೆಗೆ ದೇಶಾದ್ಯಂತ ಬಿಜೆಪಿಯಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದೆ. ಕೆಲವು ನಾಯಕರು ಇದು ನರಮೇಧದ ಕರೆ ಎಂದು ಆರೋಪಿಸಿದ್ದರೆ, ಮತ್ತೆ ಕೆಲವರರು ಉದಯನಿಧಿ ವಿರುದ್ಧ ದೇಶದ್ರೋಹದ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…