BREAKING NEWS

ಎಲೆತೋಟದ ಕರು ಭಕ್ಷಕ ಮೊಸಳೆ ಕೊನೆಗೂ ಸೆರೆ

ಅರಣ್ಯ ಇಲಾಖೆಯ ಜೆಸಿಬಿ ಕಾರ್ಯಾಚರಣೆಯಲ್ಲಿ ಕೊನೆಗೂ ಬಲೆಗೆ ಬಿದ್ದ ಮೊಸಳೆ

ಮೈಸೂರು: ನಗರದ ಜೆಎಸ್ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಮೊಸಳೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಗುರುವಾರ ಬೆಳಗ್ಗೆ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಂಜೆ ವೇಳೆಗೆ ಮೊಸಳೆಯನ್ನು ಹಿಡಿಯಲು ಯಶಸ್ವಿಯಾಗಿದೆ. ಇದರೊಂದಿಗೆ ಕಳೆದ ಒಂದು ತಿಂಗಳಿನಿಂದ ಎಲೆ ತೋಟದ ನಿವಾಸಿಗಳಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ.

ನಗರದ ರಾಮಾನುಜ ರಸ್ತೆ ಒಂಬತ್ತನೇ ಕ್ರಾಸ್ ರಸ್ತೆಯಲ್ಲಿ ಭಾನುವಾರ ಈ ಮೊಸಳೆ ಕರುವೊಂದನ್ನು ಬಲಿ ತೆಗೆದುಕೊಂಡಿತ್ತು. ಅಂದು ಕರು ಭಕ್ಷಣೆ ಬಳಿಕ ಕೆರೆ ಸೇರಿಕೊಂಡಿದ್ದ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವಿಫಲವಾಗಿತ್ತು. ಗುರುವಾರ ಜೆಸಿಬಿ ಬಳಸಿ ಹೊಸದಾಗಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಆರ್ಎಫ್ಓ ಸುರೇಂದ್ರ, ಡಿ ಆರ್ಎಫ್ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಸ್ಥಳೀಯರಾದ ಮಧುಕರ್ ಮತ್ತು ಸ್ನೇಹಿತರು ಕಾರ್ಯಾಚರಣೆಯಲ್ಲಿ ನೆರವು ನೀಡಿದ್ದರು.

ಸೋಮವಾರ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಕಾಣಿಸಿಕೊಂಡ ಮೊಸಳೆ ಇದೇ ಜಾಗದಲ್ಲಿ ಪದೇಪದೇ ಕಾಣಿಸಿಕೊಂಡಿತ್ತು. ಆದರೆ ಕೊಳಚೆ ನೀರಿನಲ್ಲಿ ಮೊಸಳೆಯ ಇರುವು ಪತ್ತೆ ಮಾಡಲೂ ಕಷ್ಟವಾಗುತ್ತಿತ್ತು. ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಕೊಳಚೆ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿದ್ದರಿಂದ ಕಾರ್ಯಾಚರಣೆ ಸವಾಲಿನ ಕೆಲಸವಾಗಿತ್ತು. ಈ ಕಾರಣದಿಂದ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಇದೀಗ ನೈಜ ಸಂಗತಿ ಬೆಳಕಿಗೆ ಬರಲಿದೆ. ಇದೀಗ ಸರೆಯಾಗಿರುವ ಮೊಸಳೆ ಸುಮಾರು ಆರು ಅಡಿಗಳಷ್ಟು ಉದ್ದವಿದೆ.

ಇದೀಗ ಸೆರೆಯಾಗಿರುವ ಮೊಸಳೆ ಸುಮಾರು ಎಂಟೂವರೆ ಅಡಿಗಳಷ್ಟು ಉದ್ದವಿದೆ. ಮೃಗಾಲಯದಲ್ಲಿ ಇದರ ವಯಸ್ಸು, ಗಾತ್ರ, ತೂಕ ಇತ್ಯಾದಿ ವಿವರಗಳನ್ನು ದಾಖಲಿಸಿದ ಬಳಿಕ ಕಬಿನಿ ಹಿನ್ನೀರಿಗೆ ಬಿಡಲು ಅರಣ್ಯ ಇಲಾಖೆ ನಿರ್ಧರಿಸಿದೆ.
ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಇದೀಗ ನೈಜ ಸಂಗತಿ ಬೆಳಕಿಗೆ ಬರಲಿದೆ.



ಎಲೆತೋಟದ ಮೊಸಳೆ ಕಬಿನಿ ಹಿನ್ನೀರಿಗೆ
ಮೈಸೂರಿನ ಜನತೆಯಲ್ಲಿ ಆತಂಕ ಮೂಡಿಸಿದ್ದ ಮೊಸಳೆಯನ್ನು ಸೆರೆ ಹಿಡಿಯಲು ನಮ್ಮ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ರಾಜ ಕಾಲುವೆಯ ಕೊಳಚೆ ನೀರಿನಲ್ಲಿಯೇ ಇರುತ್ತಿದ್ದ ಈ ಮೊಸಳೆಯನ್ನು ಹಿಡಿಯಲು ನಮ್ಮ ಸಿಬ್ಬಂದಿ ಬಹಳಷ್ಟು ಶ್ರಮಪಟ್ಟಿದ್ದಾರೆ. ಈ ಮೊಸಳೆಯ ವಯಸ್ಸು, ಗಾತ್ರ, ತೂಕ ಇತ್ಯಾದಿ ವಿವರಗಳನ್ನು ದಾಖಲಿಸಿಕೊಂಡ ಬಳಿಕ ಕಬಿನಿ ಹಿನ್ನೀರಿನಲ್ಲಿ ಬಿಡಲಾಗುವುದು.
-ಕರಿಕಾಳನ್, ಡಿಸಿಎಫ್ ಮೈಸೂರು

andolanait

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

24 mins ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

27 mins ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

28 mins ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

29 mins ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

33 mins ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

38 mins ago