ಪಂಜಾಬ್ : ತಲೆಮರೆಸಿಕೊಂಡಿದ್ದ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ.
ಖಲಿಸ್ತಾನ್ ಮುಖಂಡ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ.ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಪಂಜಾಬ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಖಲಿಸ್ತಾನಿ ಉಗ್ರ ಅಮೃತ್ಪಾಲ್ ಸಿಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ..
ಇತ್ತೀಚೆಗಷ್ಟೇ ಅಮೃತ್ಪಾಲ್ ಸಿಂಗ್ ಪತ್ನಿಯನ್ನು ವಶಕ್ಕೆ ಪಡೆಯಲಾಗಿತ್ತು. ಮಾರ್ಚ್ 18 ರಿಂದ ಖಲಿಸ್ತಾನಿ ಉಗ್ರ ಅಮೃತ್ಪಾಲ್ ಸಿಂಗ್ ಗಾಗಿ ದೇಶದಲ್ಲಿ ಹುಡುಕಾಟ ನಡೆಯುತ್ತಲೇ ಇತ್ತು. ನೇಪಾಳಕ್ಕೆ ಪರಾರಿಯಾಗಿದ್ದಾರೆ ಎಂದೂ ಹೇಳಲಾಗಿತ್ತು.